ADVERTISEMENT

22ರಿಂದ ಇಂದ್ರಧನುಷ್ ಲಸಿಕೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 21:37 IST
Last Updated 20 ಫೆಬ್ರುವರಿ 2021, 21:37 IST

ಬೆಂಗಳೂರು: ‘ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಇದೇ 22ರಿಂದ ಮಾರ್ಚ್ 22 ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಯಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

‘ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಬೆಂಗಳೂರು, ಬಿಬಿಎಂಪಿ ವ್ಯಾಪ್ತಿ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಈ ಲಸಿಕೆ ನೀಡಲಾಗುವುದು’ ಎಂದರು.

‘ಕೇಂದ್ರ ಸರ್ಕಾರ ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನಗೊಳಿಸಿದೆ. ಈವರೆಗೆ ತಲುಪಲಾಗದ ಪ್ರದೇಶಗಳನ್ನು ಗುರಿಯಾಗಿಟ್ಟು, ವಲಸಿಗರನ್ನು ಹೊಂದಿದ ಸ್ಲಂ, ಇಟ್ಟಿಗೆ ಸುಡುವ ಜಾಗ, ಅಲೆಮಾರಿಗಳು ವಾಸಿಸುವ ಸ್ಥಳ, ಕಟ್ಟಡ ನಿರ್ಮಾಣ ಸ್ಥಳ ಮತ್ತಿತರ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಡಿಫ್ತೀರಿಯಾ, ವೂಫಿಂಗ್ ಕಾಫ್, ಟೆಟಾನಸ್, ಟ್ಯುಬರ್ ಕ್ಯುಲೋಸಿಸ್, ಪೋಲಿಯೋ, ಮಿಸಲ್ಸ್, ಹೆಪಟೈಟಸ್‌ಗೆ -ಬಿಗೆ ಈ ಲಸಿಕೆ ನೀಡಲಾಗುತ್ತದೆ’ ಎಂದೂ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.