ADVERTISEMENT

ಜಮ್ಮು: ಗಡಿಯೊಳಗೆ ನುಸುಳುವ ಉಗ್ರರ ಯತ್ನ ವಿಫಲಗೊಳಿಸಿದ ಸೇನೆ

ಪಿಟಿಐ
Published 9 ಏಪ್ರಿಲ್ 2023, 3:10 IST
Last Updated 9 ಏಪ್ರಿಲ್ 2023, 3:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಉಗ್ರರ ಗುಂಪಿನ ಒಳ ನುಸುಳುವಿಕೆ ಯತ್ನವನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಹಪುರ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ನಸುಕಿನ ವೇಳೆಯಲ್ಲಿ ಉಗ್ರರ ನುಸುಳುವ ಪ್ರಯತ್ನವನ್ನು ಸೇನಾಪಡೆ ವಿಫಲಗೊಳಿಸಿದೆ.

ಈ ವೇಳೆ ಉಗ್ರರು ಹಾಗೂ ಸೇನಾಪಡೆ ನಡುವೆ ಕೆಲಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಇಡೀ ಪ್ರದೇಶವನ್ನು ಸುತ್ತುವರಿದಿರುವ ಸೇನೆ, ತೀವ್ರ ಶೋಧ ಕಾರ್ಯ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.