ADVERTISEMENT

ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ನಾಲ್ವರು ಉಗ್ರರ ಹತ್ಯೆ

ಪಿಟಿಐ
Published 23 ಜೂನ್ 2023, 6:13 IST
Last Updated 23 ಜೂನ್ 2023, 6:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳ ನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಕಾಲಾ ಜಂಗಲ್ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಕಳೆದ ಶುಕ್ರವಾರ ಕೇರನ್ ಸೆಕ್ಟರ್‌ನ ಜುಮಾಗುಂದ್ ಪ್ರದೇಶದಲ್ಲಿ ಒಳ ನುಸುಳುವಿಕೆ ಯತ್ನ ವಿಫಲಗೊಳಿಸಿದ್ದ ಭದ್ರತಾ ಪಡೆ, ಐವರು ಉಗ್ರರನ್ನು ಹತ್ಯೆಗೈದಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.