ADVERTISEMENT

ಹಣದುಬ್ಬರ ಏರಿಕೆ, ಜನರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ರಾಹುಲ್ ಗಾಂಧಿ

ಪಿಟಿಐ
Published 19 ಮಾರ್ಚ್ 2022, 6:32 IST
Last Updated 19 ಮಾರ್ಚ್ 2022, 6:32 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಹಣದುಬ್ಬರ ಮತ್ತಷ್ಟು ಏರಿಕೆಯಾಗಲಿದೆ ಎಂದು ಎಚ್ಚರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶನಿವಾರ ಒತ್ತಾಯಿಸಿದ್ದಾರೆ.

ಹಣದುಬ್ಬರ ಭಾರತೀಯರ ಮೇಲಿನ ತೆರಿಗೆ ಎಂದುಪ್ರತಿಪಾದಿಸಿರುವ ರಾಹುಲ್ ಗಾಂಧಿ, ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗುವ ಮೊದಲೇ ದಾಖಲೆ ಪ್ರಮಾಣದ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದವರು ತತ್ತರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:

'ಹಣದುಬ್ಬರವು ಮತ್ತಷ್ಟು ಏರಿಕೆಯಾಗಲಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಅಮೆರಿಕನ್ ಡಾಲರ್, ಆಹಾರ ಬೆಲೆ ಶೇ 22ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕೋವಿಡ್ ಜಾಗತಿಕ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸುತ್ತದೆ. ಹಾಗಾಗಿ ಕೇಂದ್ರ ಸರ್ಕಾರವು ಈಗಲೇ ಕಾರ್ಯಪ್ರವೃತರಾಗಿ ಜನರನ್ನು ರಕ್ಷಿಸಬೇಕಿದೆ' ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.