ADVERTISEMENT

ನಿಮಿಷ ಪ್ರಿಯಾ ಪ್ರಕರಣ: AP ಅಬೂಬಕ್ಕರ್‌ ಮುಸ್ಲಿಯಾರ್‌ ನೇತೃತ್ವದಲ್ಲಿ ಮಧ್ಯಸ್ಥಿಕೆ

ಪಿಟಿಐ
Published 14 ಜುಲೈ 2025, 16:19 IST
Last Updated 14 ಜುಲೈ 2025, 16:19 IST
   

ಕೋಯಿಕ್ಕೋಡ್‌: ಕೇರಳದ ನರ್ಸ್‌ ನಿಮಿಷ ಪ್ರಿಯಾ ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಧಾರ್ಮಿಕ ಗುರು ಕಾಂತಪುರಂ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌ ಮಧ್ಯಪ್ರವೇಶಿಸಿದ್ದಾರೆ. ‌

94 ವರ್ಷದ ಶೇಕ್‌ ಅಬೂಬಕ್ಕರ್ ಅವರು ಯೆಮೆನ್‌ನಲ್ಲಿರುವ ಧಾರ್ಮಿಕ ಮುಖಂಡ ಶೇಕ್‌ ಹಬೀರ್‌ ಉಮರ್‌ ನೇತೃತ್ವದಲ್ಲಿ ಸಭೆ ನಡೆಸಿದ್ದು, ಇದರಲ್ಲಿ ಮಹ್ದಿ ಕುಟುಂಬದ ಸದಸ್ಯರು ಭಾಗವಹಿಸಿದ್ದಾರೆ. 

ನಿಮಿಷ ಮಾಡಿದ ತಪ್ಪನ್ನು ಕ್ಷಮಿಸುವುದಕ್ಕಾಗಿ ಸಂತ್ರಸ್ತರು ಅಥವಾ ಅವರ ಕುಟುಂಬದವರಿಗೆ ಪ್ರಕರಣದ ಆರೋಪಿಗಳು ಪರಿಹಾರದ ರೂಪದಲ್ಲಿ ನೀಡುವ ಮೊತ್ತ ‘ಬ್ಲಡ್‌ ಮನಿ’ ನೀಡುವ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ, ಈ ಕುರಿತು ಇದುವರೆಗೂ ಅಧಿಕೃತ ಸಂದೇಶವು ಪ್ರಕಟಗೊಂಡಿಲ್ಲ.

ADVERTISEMENT

ಯೆಮೆನ್‌ನಲ್ಲಿ ಶರಿಯಾ ಕಾನೂನು ಜಾರಿಯಲ್ಲಿದೆ. ‘ಬ್ಲಡ್‌ ಮನಿ’ ಕೊಟ್ಟು ಶಿಕ್ಷೆಯಿಂದ ಪಾರಾಗಲು ಅವಕಾಶವಿದೆ. ಮುಸ್ಲಿಯಾರ್‌ ಅವರ ಪ್ರಧಾನ ಕಚೇರಿಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿ ಮಾತುಕತೆ ನಡೆಸುವುದಕ್ಕಾಗಿಯೇ ಕಚೇರಿ ಆರಂಭಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.