ಓಂ ಪ್ರಕಾಶ್ ಚೌಟಾಲಾ
ಚಂಡೀಗಢ: ಹರಿಯಾಣದ ಮಾಜಿ ಮುಖ್ಯಮಂತ್ರಿ, ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ಚೌಟಾಲಾ ಇಂದು (ಶುಕ್ರವಾರ) ನಿಧನರಾದರು.
ಅವರಿಗೆ 89 ವರ್ಷ ವಯಸ್ಸಾಗಿತ್ತು.
ಓಂ ಪ್ರಕಾಶ್ ಚೌಟಾಲಾ ಅವರು ಗುರುಗ್ರಾಮದ ಸ್ವಗೃಹದಲ್ಲಿ ಇಂದು ಹೃದಯ ಸ್ತಂಭನದಿಂದ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮಾಜಿ ಉಪ ಪ್ರಧಾನಿ ದೇವಿಲಾಲ್ ಅವರ ಪುತ್ರರಾಗಿರುವ ಓಂ ಪ್ರಕಾಶ್ ಚೌಟಾಲಾ, ಐದು ಬಾರಿ ಹರಿಯಾಣದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.