ADVERTISEMENT

ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು: ವಿಜಯ್ ಶಾ ಹೇಳಿಕೆ ವಿವಾದ

ಪಿಟಿಐ
Published 13 ಮೇ 2025, 16:29 IST
Last Updated 13 ಮೇ 2025, 16:29 IST
<div class="paragraphs"><p>ಕರ್ನಲ್ ಸೋಫಿಯಾ ಖುರೇಷಿ</p></div>

ಕರ್ನಲ್ ಸೋಫಿಯಾ ಖುರೇಷಿ

   

ಪಪಿಟಿಐ ಚಿತ್ರ

ನವದೆಹಲಿ: ‘ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ... ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್‌ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್‌ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದ ಸೃಷ್ಟಿಸಿದೆ.

ADVERTISEMENT

ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ಈ ವಿಡಿಯೊವನ್ನು ಭಾರಿ ಸಂಖ್ಯೆಯಲ್ಲಿ ಹಂಚಿಕೊಳ್ಳಲಾಗುತ್ತಿತ್ತು, ವಿಜಯ್‌ ಅವರು ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಈ ವಿಡಿಯೊವನ್ನು ಕಾಂಗ್ರೆಸ್‌ ಕೂಡ ಹಂಚಿಕೊಂಡಿದ್ದು ತೀವ್ರವಾಗಿ ಟೀಕಿಸಿದೆ.

ಆದರೆ, ‘ತಮ್ಮ ಹೇಳಿಕೆಯನ್ನು ಕೆಲವರು ತಿರುಚಿದ್ದಾರೆ’ ಎಂದು ವಿಜಯ್‌ ಹೇಳಿದ್ದಾರೆ.

‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಮನಃಸ್ಥಿತಿಯು ಎಂದಿಗೂ ಮಹಿಳಾ ವಿರೋಧಿಯೇ ಆಗಿದೆ. ಉಗ್ರರ ಗುಂಡಿಗೆ ಬಲಿಯಾದ ನೌಕಾ ಪಡೆಯ ಅಧಿಕಾರಿಯ ಪತ್ನಿಯನ್ನು ಮೊದಲಿಗೆ ಟ್ರೋಲ್‌ ಮಾಡಲಾಯಿತು. ನಂತರ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರ ಮಗಳನ್ನು ಹಿಂಸಿಸಲಾಯಿತು. ಈಗ ಕರ್ನಲ್‌ ಸೋಫಿಯಾ ಖುರೇಷಿ ಅವರ ಮೇಲೆ ಬಿಜೆಪಿ ಸಚಿವರು ಕೀಳು ಮಟ್ಟದಲ್ಲಿ ಮಾತನಾಡುತ್ತಿದ್ದಾರೆ. ಇಂಥ ಸಚಿವನನ್ನು ಪ್ರಧಾನಿ ಮೋದಿ ಅವರು ತಕ್ಷಣವೇ ಅಮಾನತು ಮಾಡಬೇಕು’ ಎಂದು ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.