ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ವಿಲೀನಗೊಳ್ಳಬೇಕು ಮತ್ತು ನೆರೆಯ ರಾಷ್ಟ್ರದ ಪ್ರಾಯೋಜಿತ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ನ ಅಧ್ಯಕ್ಷ ಅಲೋಕ್ ಕುಮಾರ್ ಕರೆ ನೀಡಿದ್ದಾರೆ.
‘ಈಗ ಜಗತ್ತನ್ನು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಮುಕ್ತಗೊಳಿಸುವ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಜಿಹಾದಿಗಳ ಹಿಡಿತದಿಂದ ಮುಕ್ತಗೊಳಿಸಿ ಭಾರತದೊಂದಿಗೆ ವಿಲೀನಗೊಳಿಸುವ ಸಮಯ ಬಂದಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ ಸರ್ಕಾರ ತೆಗೆದುಕೊಂಡ ಕಠಿಣ ರಾಜತಾಂತ್ರಿಕ ಕ್ರಮಗಳು ಪಾಕಿಸ್ತಾನವನ್ನು ವಿಶ್ವದಲ್ಲಿ ಏಕಾಂಗಿಯಾಗಿ ಮಾಡಿದೆ’ ಎಂದು ಅವರು ಹೇಳಿದ್ದಾರೆ.
‘ಪಾಕಿಸ್ತಾನ ಸೇರಿದಂತೆ ಇಡೀ ಜಗತ್ತಿನಲ್ಲಿರುವ ಯಾವುದೇ ಭಾರತ ವಿರೋಧಿ ರಚನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಸಾಮರ್ಥ್ಯ ಭಾರತಕ್ಕಿದೆ. ಈಗ ಪಾಕಿಸ್ತಾನ ತನ್ನ ದುಷ್ಕೃತ್ಯಗಳಿಗೆ ಶಿಕ್ಷೆಯನ್ನು ಎದುರಿಸಲು ಸಿದ್ಧವಾಗಿರಬೇಕು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಅಭಿವೃದ್ಧಿ ಹೊಂದುತ್ತಿರುವ ಕಾಶ್ಮೀರದ ಆರ್ಥಿಕತೆ ಮತ್ತು ಸಮೃದ್ಧಿಯನ್ನು ನಾಶಮಾಡುವ ಉದ್ದೇಶದಿಂದ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಪಹಲ್ಗಾಮ್‌ನಲ್ಲಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.