ನವದೆಹಲಿ: ಗುಪ್ತಚರ ಇಲಾಖೆ (Intelligence Bureau) ಮುಖ್ಯಸ್ಥ ತಪನ್ ಕುಮಾರ್ ಡೆಕಾ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶಿಸಿದೆ.
ಹಿಮಾಚಲ ಪ್ರದೇಶ ಕೇಡರ್‌ನ ತಪನ್ ಡೆಕಾ 1998ನೇ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವಾ (ಐಪಿಎಸ್) ಅಧಿಕಾರಿ.
2025ರ ಜೂನ್ 30ಕ್ಕೆ ಅವರ ಅಧಿಕಾರಾವಧಿ ಮುಕ್ತಾಯಗೊಳ್ಳಬೇಕಿತ್ತು. ಈಗ ಜೂನ್ 2026 ರವರೆಗೆ ಒಂದು ವರ್ಷದ ಅವಧಿಗೆ ಗುಪ್ತಚರ ಇಲಾಖೆಯ ನಿರ್ದೇಶಕರಾಗಿ ಡೆಕಾ ಅವರ ಅಧಿಕಾರಾವಧಿ ವಿಸ್ತರಿಸಲು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.