ADVERTISEMENT

ಕೋವಿಡ್–19 ಹೆಚ್ಚಳ: ಏ.30 ರವರೆಗೆ ಅಂತರರಾಷ್ಟ್ರೀಯ ವಿಮಾನಯಾನ ರದ್ದು

ಏಜೆನ್ಸೀಸ್
Published 24 ಮಾರ್ಚ್ 2021, 1:57 IST
Last Updated 24 ಮಾರ್ಚ್ 2021, 1:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೋವಿಡ್‌ ಹೊಸ ಪ್ರಕಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ರದ್ದು ಆದೇಶವನ್ನು ಏ. 30 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.

‘ಈಗಾಗಲೇ ಹೊರಡಿಸಿರುವ ಸುತ್ತೋಲೆಯ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಸೇವೆಯನ್ನು ಏ.30ರವರೆಗೆ ರದ್ದುಪಡಿಸಲಾಗಿದೆ’ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ಉಲ್ಲೇಖಿಸಿದೆ.

‘ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಕೋವಿಡ್‌ ಕಾರಣದಿಂದಾಗಿ ಕಳೆದ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧಿಸಲಾಗಿದೆ. ವಂದೇ ಭಾರತ್‌ ಮಿಷನ್‌ನಡಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರಲು ಮೇ 7ರಿಂದ ವಿಶೇಷ ವಿಮಾನಗಳನ್ನು ನಿಯೋಜಿಸಲಾಗಿತ್ತು. ಈ ಸೇವೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.