ADVERTISEMENT

Yoga Day 2025; ಗಿನ್ನೆಸ್ ದಾಖಲೆ ನಿರ್ಮಿಸಿದ ಬುಡಕಟ್ಟು ವಿದ್ಯಾರ್ಥಿಗಳು

ಪಿಟಿಐ
Published 21 ಜೂನ್ 2025, 7:50 IST
Last Updated 21 ಜೂನ್ 2025, 7:50 IST
<div class="paragraphs"><p>ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ&nbsp;</p></div>

ವಿದ್ಯಾರ್ಥಿಗಳ ಜತೆ ಪ್ರಧಾನಿ ಮೋದಿ 

   

ಪಿಟಿಐ ಚಿತ್ರ 

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಆರ್‌ಕೆ ಬೀಚ್‌ ಕಾರಿಡಾರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಇಂದು (ಜೂನ್‌ 21) ಬಂದರು ನಗರಿ ವಿಶಾಖಪಟ್ಟಣದ ಆರ್‌ಕೆ ಬೀಚ್‌ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್‌ನಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಅವರಿಗೆ ಮುಖ್ಯಮಂತ್ರಿ ಎ. ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾಥ್ ನೀಡಿದ್ದಾರೆ.

ಪ್ರಪಂಚದಾದ್ಯಂತ ಹಲವಾರು ದೇಶಗಳು 'ಒಂದು ಭೂಮಿಗೆ ಒಂದು ಆರೋಗ್ಯ' ಎಂಬ ಘೋಷವಾಕ್ಯದಡಿ ಈ ವರ್ಷಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಆಚರಿಸಲಾಗಿದೆ. ವಿಶಾಖಪಟ್ಟಣದಲ್ಲಿ ಒಂದೇ ಸ್ಥಳದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಯೋಗಾಸನದಲ್ಲಿ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಮೇಲೆ ಕಣ್ಣಿಡಲಾಗಿದೆ ಎನ್ನಲಾಗಿದೆ.

ಗಿನ್ನೆಸ್ ದಾಖಲೆ

ಬುಡಕಟ್ಟು ಸಮುದಾಯಕ್ಕೆ ಸೇರಿದ 22,122 ವಿದ್ಯಾರ್ಥಿಗಳು ಏಕಕಾಲದಲ್ಲಿ 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಗಿನ್ನೆಸ್ ದಾಖಲೆ ಬರೆದಿದ್ದಾರೆ ಎಂದು ಘೋಷಿಸಲು ನಮಗೆ ಹೆಮ್ಮೆಯಾಗುತ್ತದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇದು ಆಂಧ್ರಪ್ರದೇಶದ ಮಕ್ಕಳು ಜಗತ್ತಿಗೆ ಯೋಗಕ್ಷೇಮ ಮತ್ತು ಸಾಮರಸ್ಯದ ಪ್ರಬಲ ಸಂದೇಶವನ್ನು ಸಾರಿದ್ದಾರೆ ಎಂದೂ ನಾಯ್ಡು ತಿಳಿಸಿದ್ದಾರೆ.

ಆಂಧ್ರಪ್ರದೇಶ ಸರ್ಕಾರ 'ಯೋಗಾಂಧ್ರ' ಎಂಬ ಒಂದು ತಿಂಗಳ ಅಭಿಯಾನವನ್ನು ಆರಂಭಿಸಿ ಯೋಗದ ಹುಟ್ಟು, ಇತಿಹಾಸದ ಮಾಹಿತಿ ಜತೆಗೆ ಯೋಗಾಭ್ಯಾಸದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ನುರಿತ 5,451 ತರಬೇತುದಾರರು ಅರಿವು ಮೂಡಿಸುವುದ ಜತೆಗೆ ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ಪ್ರಮಾಣೀಕರಣ ಪತ್ರಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.