ADVERTISEMENT

ಇನ್ವೆಸ್ಟ್ ಕರ್ನಾಟಕ | ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕು: ಮೋದಿ

ಇನ್ವೆಸ್ಟ್ ಕರ್ನಾಟಕ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 5:52 IST
Last Updated 2 ನವೆಂಬರ್ 2022, 5:52 IST
 ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಆಡಳಿತ ವ್ಯವಸ್ಥೆಯಲ್ಲಿ ಕೆಂಪುಪಟ್ಟಿಗೆ ವಿದಾಯ ಹೇಳಿ, ಹೂಡಿಕೆದಾರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಗರದ ಬೆಂಗಳೂರು ಅರಮನೆ ಆವರಣದಲ್ಲಿ ಬುಧವಾರ ಆರಂಭವಾದ ಇನ್ವೆಸ್ಟ್ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮ್ಮೇಳನವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಸಂಕಷ್ಟದ ಸವಾಲಿನ ನಡುವೆಯೂ ದೇಶ ಪ್ರಗತಿಯ ಹಾದಿಯಲ್ಲಿದೆ‌. ಸವಾಲುಗಳನ್ನು ಎದುರಿಸಿಕೊಂಡು ಇನ್ನಷ್ಟು ಪ್ರಗತಿ ಸಾಧಿಸಬೇಕಿದೆ.‌ ರಾಜ್ಯಗಳು ಪ್ರಗತಿ ಸಾಧಿಸಿದರೆ ದೇಶವೂ ಅಭಿವೃದ್ಧಿ ಹೊಂದುತ್ತದೆ. ಈ ದಿಸೆಯಲ್ಲಿ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಹೆಚ್ಚು ಅನುಕೂಲಕಾರಿ ಎಂದರು.

ADVERTISEMENT

ಹೂಡಿಕೆ ಸ್ನೇಹಿ ವಾತಾವರಣ ಸೃಷ್ಟಿಸಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದಕ್ಕಾಗಿ ನಮ್ಮ ಸರ್ಕಾರ 1,500 ಹಳೆಯ ಮತ್ತು ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಿದೆ. ದೇಶವು ಈಗ ಡಿಜಿಟಲ್ ಕ್ರಾಂತಿಯ ಹಾದಿಯಲ್ಲಿದೆ. ಅದಕ್ಕೆ ಪೂರಕವಾಗಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ಪ್ರಧಾನಿ ಹೇಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಜಾಗತಿಕ ಹೂಡಿಕೆದಾರರ ಸಮ್ಮೇಳನವು ಸ್ಪರ್ಧಾತ್ಮಕ ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆಯ ಭಾಗ. ಜಗತ್ತಿನ ಹಲವು ರಾಷ್ಟ್ರಗಳ ಹೂಡಿಕೆದಾರರು ರಾಜ್ಯವೊಂದರಲ್ಲಿ ಹಲವು ಸಾವಿರ ಕೋಟಿ‌ ರೂಪಾಯಿಗಳ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ. ಇದರಿಂದ ದೇಶಕ್ಕೆ ಮತ್ತಷ್ಟು ವಿದೇಶಿ ನೇರ ಬಂಡವಾಳ ಹರಿದು ಬರಲಿದೆಇನ್ನೂ ಎಂದರು.

ಹೆಚ್ಚು ಪ್ರಮಾಣದ ವಿದೇಶಿ ನೇರ ಹೂಡಿಕೆ ಆಕರ್ಷಿಸುವುದಕ್ಕಾಗಿಯೇ ಹೊಸ ಹೊಸ ಕ್ಷೇತ್ರಗಳಲ್ಲಿ ಎಫ್‌ಡಿಐಗೆ ಅನುಮತಿ‌ ನೀಡಲಾಗಿದೆ. ರಕ್ಷಣಾ ಕ್ಷೇತ್ರದಲ್ಲೂ ವಿದೇಶಿ ಹೂಡಿಕೆಗೆ ಸಮ್ಮತಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಬ್ರ್ಯಾಂಡ್ ಬೆಂಗಳೂರು ಈಗ ಜಗತ್ತಿನಾದ್ಯಂತ ಹೆಸರು ಮಾಡಿದೆ. ಬೆಂಗಳೂರಿನಲ್ಲಿ ಪ್ರತಿಭೆ ಮತ್ತು ತಂತ್ರಜ್ಞಾನ ಎರಡೂ ಈ‌ ನಗರದಲ್ಲಿವೆ ಎಂದು‌ ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.