ADVERTISEMENT

ಮಧ್ಯಂತರ ಜಾಮೀನಿಗೆ ಚಿದಂಬರಂ ಅರ್ಜಿ

ಪಿಟಿಐ
Published 30 ಅಕ್ಟೋಬರ್ 2019, 20:06 IST
Last Updated 30 ಅಕ್ಟೋಬರ್ 2019, 20:06 IST

ನವದೆಹಲಿ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಹಿರಿಯ ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ಅವರು ಅನಾರೋಗ್ಯದ ಕಾರಣ ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

ಹಿರಿಯ ವಕೀಲ ಕಪಿಲ್‌ ಸಿಬಲ್‌, ಈ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಸಿ. ಹರಿ ಶಂಕರ್‌ ಅವರ ಪೀಠಕ್ಕೆ ಸಲ್ಲಿಸಿದ್ದು, ವಿಚಾರಣೆ ಗುರುವಾರ ನಡೆಯಲಿದೆ.‌

ಮರಳಿ ತಿಹಾರ ಜೈಲಿಗೆ: ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ಚಿದಂಬರಂ ಅವರನ್ನು ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಅವಧಿ
ನ.13ರ ತನಕ ಇರಲಿದ್ದು, ಅವರನ್ನು ತಿಹಾರ ಜೈಲಿಗೆ ಪುನಃ ಕಳುಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.