ADVERTISEMENT

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಚಿದಂಬರಂ ಜಾಮೀನು ಅರ್ಜಿ ವಿಚಾರಣೆ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ

ಏಜೆನ್ಸೀಸ್
Published 20 ನವೆಂಬರ್ 2019, 5:29 IST
Last Updated 20 ನವೆಂಬರ್ 2019, 5:29 IST
ಪಿ. ಚಿದಂಬರಂ
ಪಿ. ಚಿದಂಬರಂ   

ನವದೆಹಲಿ:ಐಎನ್‌ಎಕ್ಸ್ ಮೀಡಿಯಾಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂಸಲ್ಲಿಸಿರುವ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಜಾಮೀನು ತಿರಸ್ಕರಿಸಿ ದೆಹಲಿ ಹೈಕೋರ್ಟ್ ಈಚೆಗೆ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಚಿದಂಬರಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ಚಿದಂಬರಂ ಅರ್ಜಿಯನ್ನು ಸೂಕ್ತ ಪೀಠದ ಮುಂದೆ ಪ್ರಸ್ತುತಪಡಿಸುವಂತೆ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಸೋಮವಾರ ಆದೇಶ ನೀಡಿದ್ದರು. ಚಿದಂಬರಂ ಅವರು 90 ದಿನಗಳಿಂದ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರೂ ಇದ್ದ ಪೀಠಕ್ಕೆ ಹಿರಿಯ ವಕೀಲ ಕಪಿಲ್ ಸಿಬಲ್ ಮನವಿ ಮಾಡಿದ್ದರು. ಆದರೆ, ಮಂಗಳವಾರ ಅಥವಾ ಬುಧವಾರ ವಿಚಾರಣೆ ನಡೆಸಲಾಗುವುದು ಎಂದು ಪೀಠ ಹೇಳಿತ್ತು.

ಚಿದಂಬರಂ ಅವರ ಜಾಮೀನು ಅರ್ಜಿಯನ್ನು ಇದೇ 15ರಂದು ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಆರೋಪಿಯ ವಿರುದ್ಧ ಮಾಡಲಾಗಿರುವ ಆರೋಪಗಳು ಗಂಭೀರವಾದವು. ಐಎನ್‌ಎಕ್ಸ್‌ ಮೀಡಿಯಾ ಪ್ರಕರಣದಲ್ಲಿ ಆರೋಪಿಯು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿತ್ತು.

ADVERTISEMENT

ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಚಿದಂಬರಂ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾ ಪ್ರರಣಕ್ಕೆ ಸಂಬಂಧಿಸಿ 2017ರ ಮೇನಲ್ಲಿ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಅವರನ್ನು ಆಗಸ್ಟ್ 21ರಂದು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಆದರೆ, ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ‍್ರಕರಣದಲ್ಲಿ ಜಾಮೀನು ದೊರೆತಿರುವುದರಿಂದ ಅವರು ಜೈಲಿನಲ್ಲೇ ಇರಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.