ಚಂಡೀಗಢ: ಹರಿಯಾಣದ ಐಪಿಎಸ್ ಅಧಿಕಾರಿ ವೈ. ಪೂರನ್ ಕುಮಾರ್ ಅವರ ಮೃತದೇಹ ಚಂಡೀಗಢದ ಅವರ ನಿವಾಸದಲ್ಲಿ ಮಂಗಳವಾರ ಪತ್ತೆಯಾಗಿದೆ.
ಪೂರನ್ ಅವರ ದೇಹದಲ್ಲಿ ಗುಂಡೇಟಿನಿಂದ ಆಗಿರುವ ಗಾಯವಿದ್ದು, ಅವರು ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಯಹತ್ಮೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
2001ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ಅವರು, ರೋಹಟಕ್‌ನ ಸುನರಿಯಾದ ಪೊಲೀಸ್ ತರಬೇತಿ ಕೇಂದ್ರದ ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪೂರನ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರೂ ಐಎಎಸ್ ಅಧಿಕಾರಿಯಾಗಿದ್ದಾರೆ.
‘ಪೂರನ್ ಅವರ ಸಾವಿನ ತನಿಖೆ ಮುಂದುವರಿದಿದೆ’ ಎಂದು ಚಂಡೀಗಢದ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್‌ದೀಪ್ ಕೌರ್ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.