ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಭಾರತದ ಪ್ರಧಾನಿ ನರೇಂದ್ರ ಮೋದಿ,
ಪಿಟಿಐ ಚಿತ್ರ
ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಜತೆ ದೂರವಾಣಿ ಮೂಲಕ ಸಂವಾದ ನಡೆಸಿದ್ದು, ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್ ಜತೆಗಿನ ಸಂಘರ್ಷವನ್ನು ತಕ್ಷಣವೇ ಶಮನಗೊಳಿಸಲು ಕರೆ ನೀಡಿದ್ದಾರೆ.
ಇರಾನ್‌ನ ಪರಮಾಣು ನೆಲೆಗಳ ಮೇಲೆ ಅಮೆರಿಕ ದಾಳಿ ನಡೆಸಿದ ಬಳಿಕ ಬಹುದೊಡ್ಡ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಈ ದಾಳಿಯ ಬಳಿಕ ಮೋದಿ, ಇರಾನ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ಇರಾನ್ ಅಧ್ಯಕ್ಷ ಮಸೂದ್ ಜತೆ ಮಾತನಾಡಿದ್ದು, ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿವರವಾಗಿ ಮಾತುಕತೆ ನಡೆಸಿದ್ದೇವೆ. ಈ ಸಂಘರ್ಷದ ಕುರಿತು ಆಳವಾದ ಕಳವಳ ವ್ಯಕ್ತಪಡಿಸಿದ್ದೇನೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಂಘರ್ಷವನ್ನು ಶಮನಗೊಳಿಸಿ ಸಾಧ್ಯವಾದಷ್ಟು ಬೇಗ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಸ್ಥಾಪಿಸುವಂತೆ ಹೇಳಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.