
ಇರಾನ್‌ನಲ್ಲಿ ಪ್ರತಿಭಟನೆ
ಶ್ರೀನಗರ: ಇರಾನ್‌ನಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಮಕ್ಕಳನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕರೆತರುವಂತೆ ಕಾಶ್ಮೀರದ ವಿದ್ಯಾರ್ಥಿಗಳ ಪೋಷಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇರಾನ್‌ನಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವಂತೆ ನಾವು ಪ್ರಧಾನಿ, ವಿದೇಶಾಂಗ ಸಚಿವರು, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್‌ಗೆ ಮನವಿ ಮಾಡುತ್ತೇವೆ’ ಎಂದು ಹೇಳಿದ್ದಾರೆ.
‘ಕೇಂದ್ರ ಸರ್ಕಾರವು ವಿದ್ಯಾರ್ಥಿಗಳಿಗೆ ನೀಡಿರುವ ಬೆಂಬಲಕ್ಕೆ ನಾವು ಕೃತಜ್ಞರಾಗಿರುತ್ತೇವೆ. ಇರಾನ್‌ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ನಾವು ಆತಂಕಕ್ಕೆ ಒಳಗಾಗಿದ್ದೇವೆ. ಈ ಹಿಂದೆ ಉಕ್ರೇನ್ ಮತ್ತು ಇರಾನ್‌ನಿಂದ ನಮ್ಮ ನಾಗರಿಕರನ್ನು ಸ್ಥಳಾಂತರಿಸಿದ ರೀತಿಯಲ್ಲೇ ಸರ್ಕಾರ ಈಗಲೂ ಕ್ರಮ ತೆಗೆದುಕೊಳ್ಳಬೇಕು’ ಎಂದು ಪೋಷಕರೊಬ್ಬರು ತಿಳಿಸಿದ್ದಾರೆ.
ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತಾವಾಗಿಯೇ ದೇಶವನ್ನು ತೊರೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ. ನಾವು ಐಎಸ್‌ಡಿ ಕರೆಗಳ ಮೂಲಕ ಮಕ್ಕಳೊಂದಿಗೆ ಸಂಪರ್ಕ ಸಾಧಿಸಬಹುದು. ಆದರೆ, ಬಹಳ ಕಷ್ಟವಾಗುತ್ತಿದೆ. ಆದ್ದರಿಂದ ಮಕ್ಕಳನ್ನು ವಾಪಸ್ ಕರೆತರಲು ಸರ್ಕಾರ ಸಹಾಯ ಮಾಡಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.