ಬಂಧನ
(ಸಾಂದರ್ಭಿಕ ಚಿತ್ರ)
ನವದೆಹಲಿ: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.2 ಕೆ.ಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇರಾಕ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
‘ಸೋಮವಾರ ಬಾಗ್ದಾದ್‌ನಿಂದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಲಾಯಿತು. ಈ ವೇಳೆ ಚಿನ್ನ ಎಂದು ಶಂಕಿಸಲಾದ ಹಳದಿ ಲೋಹ ಮತ್ತು ಬೆಳ್ಳಿ ಲೇಪಿತ ಆಭರಣಗಳು ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಪತ್ತೆಯಾಗಿವೆ’ ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಇಲಾಖೆ ಪೋಸ್ಟ್ ಮಾಡಿದೆ.
ಚಿನ್ನವನ್ನು ಕಳ್ಳಸಾಗಣೆ ಮಾಡುವ ಉದ್ದೇಶದಿಂದ ಸಾಮಾನುಗಳಲ್ಲಿ ಬಚ್ಚಿಟ್ಟಿರುವುದು ತಿಳಿದು ಬಂದಿದೆ. ಒಟ್ಟು 1,203 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.