ADVERTISEMENT

‘ನವರತ್ನ’ಗಳಾಗಿ IRCTC, IRFC ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಅನುಮೋದನೆ

ಪಿಟಿಐ
Published 3 ಮಾರ್ಚ್ 2025, 11:43 IST
Last Updated 3 ಮಾರ್ಚ್ 2025, 11:43 IST
ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್   

ನವದೆಹಲಿ: ಕೇಂದ್ರ ಸರ್ಕಾರದ ಮಾಲೀಕತ್ವದ ‘ನವರತ್ನ’ ಕಂಪನಿಗಳಾಗಿ ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ) ಮತ್ತು ಭಾರತೀಯ ರೈಲ್ವೆ ಹಣಕಾಸು ನಿಗಮವನ್ನು (ಐಆರ್‌ಎಫ್‌ಸಿ) ಮೇಲ್ದರ್ಜೆಗೇರಿಸಲು ಸರ್ಕಾರ ಸೋಮವಾರ ಅನುಮೋದನೆ ನೀಡಿದೆ.

ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆ (ಸಿಪಿಎಸ್ಇ) ಆಗಿರುವ ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್‌ನಲ್ಲಿ ವಾರ್ಷಿಕ ₹4,270.18 ಕೋಟಿ ವಹಿವಾಟು ನಡೆದಿದೆ. 2023-24ರ ಹಣಕಾಸು ವರ್ಷದಲ್ಲಿ ₹3,229.97 ಕೋಟಿ ನಿವ್ವಳ ಮೌಲ್ಯ ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ವಾರ್ಷಿಕ ₹26,644 ಕೋಟಿ ವಹಿವಾಟು ನಡೆದಿದೆ. 2023-24ರ ಹಣಕಾಸು ವರ್ಷದಲ್ಲಿ ₹49,178 ಕೋಟಿ ನಿವ್ವಳ ಮೌಲ್ಯ ಹೊಂದಿದೆ ಎಂದೂ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

‘ನವರತ್ನ’ ಸ್ಥಾನಮಾನಕ್ಕೆ ಅಪ್‌ಗ್ರೇಡ್ ಮಾಡಿದ ಐಆರ್‌ಸಿಟಿಸಿ ಮತ್ತು ಐಆರ್‌ಎಫ್‌ಸಿ ತಂಡಕ್ಕೆ ಅಭಿನಂದನೆಗಳು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ‘ಎಕ್ಸ್‌’ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಭಾರತ ಸರ್ಕಾರ ಕೇಂದ್ರ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಮೂರು ವರ್ಗಗಳಾಗಿ ವಿಂಗಡಿಸಿದ್ದು ಅವುಗಳನ್ನು ಮಹಾರತ್ನ, ನವರತ್ನ ಮತ್ತು ಮಿನಿರತ್ನ ಎಂದು ವರ್ಗೀಕರಿಸಲಾಗಿದೆ.

ವಿವಿಧ ಮಾನದಂಡಗಳ ಆಧಾರದ ಮೇಲೆ ಈ ವರ್ಗೀಕರಣವನ್ನು ಮಾಡಿದ್ದು, ವಿವಿಧ ವರ್ಗದ ಸಾರ್ವಜನಿಕ ಉದ್ದಿಮೆಗಳಿಗೆ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.