ADVERTISEMENT

ರೈಲಿನ ಆಹಾರದ ಗುಣಮಟ್ಟದ ಬಗ್ಗೆ 5,000ಕ್ಕೂ ಹೆಚ್ಚು ದೂರು: ಅಶ್ವಿನಿ ವೈಷ್ಣವ್‌

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2022, 19:30 IST
Last Updated 14 ಡಿಸೆಂಬರ್ 2022, 19:30 IST
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌   

ನವದೆಹಲಿ: ರೈಲಿನಲ್ಲಿ ಲಭ್ಯವಾಗುವ ಆಹಾರದ ಗುಣಮಟ್ಟಕ್ಕೆ ಸಂಬಂಧಿಸಿದಂತೆಕಳೆದ ಏಳು ತಿಂಗಳಲ್ಲಿ ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮಕ್ಕೆ (ಐಆರ್‌ಸಿಟಿಸಿ) 5,000ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಬುಧವಾರ ತಿಳಿಸಿದರು.

2022 ಏಪ್ರಿಲ್‌ 1ರಿಂದ 2022 ಅ.31ರ ವರೆಗೆ ಒಟ್ಟು 5,869 ದೂರು ಬಂದಿದ್ದು, ಆಹಾರ ಸೇವೆ ನೀಡುವವರ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದರು.

2019–20ನೇ ಸಾಲಿಗೆ ಹೋಲಿಸಿದರೆ 2020–21ರಲ್ಲಿ ಐಆರ್‌ಸಿಟಿಸಿ ಆದಾಯವು ಸುಮಾರು ಶೇ 64ರಷ್ಟು ಇಳಿಕೆಯಾಗಿದೆ. ಸದ್ಯ ಪರಿಸ್ಥಿತಿ ಸುಧಾರಿಸುತ್ತಿದ್ದು, ಆದಾಯವೂ ಏರಿಕೆಯಾಗುತ್ತಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅಕ್ಟೋಬರ್‌ 31ರ ವರೆಗೆ 4,607 ಲಕ್ಷ ಪ್ರಯಾಣಿಕರು ಐಆರ್‌ಸಿಟಿಸಿ ಮೂಲಕ ಟಿಕೆಟ್ ಬುಕ್‌ ಮಾಡಿದ್ದಾರೆ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.