ADVERTISEMENT

ಐಆರ್‌ಸಿಟಿಸಿ ಪ‍್ರಕರಣ: ಉತ್ತರಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

ಆರೋಪಪಟ್ಟಿ ಪ್ರಶ್ನಿಸಿ ಲಾಲು ಅರ್ಜಿ

ಪಿಟಿಐ
Published 5 ಜನವರಿ 2026, 16:24 IST
Last Updated 5 ಜನವರಿ 2026, 16:24 IST
ಲಾಲು ಪ್ರಸಾದ್‌
ಲಾಲು ಪ್ರಸಾದ್‌   

ನವದೆಹಲಿ: ಭಾರತೀಯ ರೈಲ್ವೆ ಹಾಗೂ ಕ್ಯಾಟರಿಂಗ್‌ ಪ್ರವಾಸೋದ್ಯಮ ನಿಗಮದ (ಐಆರ್‌ಸಿಟಿಸಿ) ಹಗರಣದಲ್ಲಿ ತಮ್ಮ ವಿರುದ್ಧ ಆರೋಪ ನಿಗದಿ ಮಾಡಿರುವುದನ್ನು ಪ್ರಶ್ನಿಸಿ ಆರ್‌ಜೆಡಿ ವರಿಷ್ಠ ಲಾಲೂ ಪ್ರಸಾದ್ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್‌ ನಿರ್ದೇಶನ ನೀಡಿದೆ. 

ಪ್ರಕರಣ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸ್ವರಾನ ಕಾಂತ ಶರ್ಮಾ, ‘ಸಿಬಿಐನ ಉತ್ತರ ಸಿಗದೇ, ಆ ರೀತಿ ಮಾಡಲು ಸಾಧ್ಯವಿಲ್ಲ’ ಎಂದು ತಿಳಿಸಿದರು. 

ಯಾದವ್‌ ಅವರ ಅರ್ಜಿಗೆ ಉತ್ತರಿಸುವಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜ.14ಕ್ಕೆ ನಿಗದಿಪಡಿಸಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.