ADVERTISEMENT

ರಾಜಕೀಯ ಪ್ರವೇಶ ಮಾಡಿದ ಯೂಸುಫ್‌: ಇರ್ಫಾನ್ ಪಠಾಣ್ ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2024, 16:19 IST
Last Updated 10 ಮಾರ್ಚ್ 2024, 16:19 IST
   

ಬೆಂಗಳೂರು: ರಾಜಕೀಯ ಪ್ರವೇಶ ಮಾಡಿದ ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಯೂಸುಫ್ ಪಠಾಣ್ ಅವರಿಗೆ ಸಹೋದರ ಇರ್ಫಾನ್ ಪಠಾಣ್ ಶುಭ ಹಾರೈಸಿದ್ದಾರೆ.

ಜನರ ಜೀವನದಲ್ಲಿ ನೀವು ಬದಲಾವಣೆ ತರಲಿದ್ದೀರಿ ಎನ್ನುವ ವಿಶ್ವಾಸ ಇದೆ ಎಂದು ಇರ್ಫಾನ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್ ಮಾಡಿರುವ ಅವರು, ಅಧಿಕಾರ ಇಲ್ಲದಿದ್ದರೂ ನಿಮ್ಮ ತಾಳ್ಮೆ, ದಯೆ, ಅಗತ್ಯವಿರುವವರಿಗೆ ಸಹಾಯ ಮಾಡುವುದು, ಜನ ಸೇವೆಯನ್ನು ಸುಲಭವಾಗಿ ಗಮನಿಸಬಹುದು. ಒಮ್ಮೆ ನೀವು ರಾಜಕೀಯಕ್ಕೆ ಕಾಲಿಟ್ಟರೆ, ಜನರ ದೈನಂದಿನ ಜೀವನದಲ್ಲಿ ನೀವು ನಿಜವಾಗಿಯೂ ಬದಲಾವಣೆಯನ್ನು ತರುತ್ತೀರಿ ಎಂದು ನನಗೆ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಮೂಲತಃ ಗುಜರಾತ್‌ನವರಾದ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದಾರೆ. ಬೆಹ್ರಾಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಅಭ್ಯರ್ಥಿಯಾಗಿ ಅವರು ಅದೃಷ್ಠ ಪರೀಕ್ಷೆಗೆ ಇಳಿಯಲಿದ್ದಾರೆ.

ಸದ್ಯ ಈ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪ್ರತಿನಿಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.