ADVERTISEMENT

ದೇಶದ ಜನರನ್ನು ಅಪಾಯಕ್ಕೆ ದೂಡಿ, ಲಸಿಕೆ ರಫ್ತು ಮಾಡುವುದು ಸರಿಯೇ: ರಾಹುಲ್‌

ಪಿಟಿಐ
Published 9 ಏಪ್ರಿಲ್ 2021, 7:00 IST
Last Updated 9 ಏಪ್ರಿಲ್ 2021, 7:00 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ‘ದೇಶದ ಜನರನ್ನು ಅಪಾಯಕ್ಕೆ ದೂಡಿ, ಬೇರೆ ದೇಶಗಳಿಗೆ ಲಸಿಕೆಯನ್ನು ರಫ್ತು ಮಾಡುವುದೇ ಸರಿಯೇ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ಕೊರೊನಾದ ಈ ಸಮಯದಲ್ಲಿ ಲಸಿಕೆಯ ಕೊರತೆ ಗಂಭೀರ ಸಮಸ್ಯೆಯಾಗಿದೆ. ಇದು ಸಂಭ್ರಮದ ವಿಷಯವಲ್ಲ. ಕೇಂದ್ರ ಸರ್ಕಾರ ಯಾವುದೇ ಭೇದ–ಭಾವವಿಲ್ಲದೆ ಎಲ್ಲಾ ರಾಜ್ಯಗಳಿಗೆ ಲಸಿಕೆ ಪೂರೈಸುವ ಮೂಲಕ ಸಹಾಯ ಮಾಡಬೇಕು’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

‘ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಿರುವಾಗ ಜನರನ್ನು ಅಪಾಯದಲ್ಲಿ ಸಿಲುಕಿಸಿ, ಲಸಿಕೆಯನ್ನು ರಫ್ತು ಮಾಡುವುದು ಸರಿಯೇ. ಹಲವು ರಾಜ್ಯಗಳು ಲಸಿಕೆಯನ್ನು ನೀಡಬೇಕೆಂದು ಮನವಿ ಮಾಡಿವೆ. ರಾಜ್ಯಗಳಿಗೆ ಲಸಿಕೆ ನೀಡಬೇಕೆಂದು ಕಾಂಗ್ರೆಸ್‌ ಎಲ್ಲರ ಪರವಾಗಿ ಮನವಿ ಮಾಡುತ್ತಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.