ಚಂಡೀಗಢ: ಬಬ್ಬರ್ ಖಾಲ್ಸಾ ಭಯೋತ್ಪಾದಕ ಸಂಘಟನೆಯ ಐವರನ್ನು ರಾಜಸ್ತಾನದಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಬಂಧಿತರಲ್ಲಿ ಒಬ್ಬಾತ ತಪ್ಪಿಸಿಕೊಳ್ಳುವ ಯತ್ನ ನಡೆಸಿದಾಗ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದು, ಈತನಿಗೆ ಎಸ್‌ಬಿಎಸ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದಿದ್ದಾರೆ.
‘ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಎಸ್‌ಬಿಎಸ್ ನಗರದಲ್ಲಿನ ಮದ್ಯದ ಅಂಗಡಿಯೊಂದರ ಮೇಲೆ ದಾಳಿ ನಡೆಸಲು ಭಯೋತ್ಪಾದಕರು ಹೊಂಚು ಹಾಕಿದ್ದರು. ಇವರಿಂದ ಗ್ರೆನೇಡ್, ಪಿಸ್ತೂಲ್, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಡಿಜಿಪಿ ಗೌರವ್ ಯಾದವ್ ತಿಳಿಸಿದ್ದಾರೆ.
ಪಾಕಿಸ್ತಾನದ ಐಎಸ್‌ಐ ಬೆಂಬಲಿತ ಬಬ್ಬರ್ ಖಾಲ್ಸಾ ಸಂಘಟನೆಯ ಅಂತರರಾಷ್ಟ್ರೀಯ ಭಯೋತ್ಪಾದಕ ಜಾಲವನ್ನು ನಾಶಗೊಳಿಸಿರುವುದಾಗಿಯೂ ಇದೇ ಸಂದರ್ಭ ಪಂಜಾಬ್ ಪೊಲೀಸರು ಹೇಳಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.