
ಸಾಂದರ್ಭಿಕ ಚಿತ್ರ
ಜೈಪುರ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಡಿ ಬಂಧಿಸಿರುವ ವ್ಯಕ್ತಿಯನ್ನು ನಾಲ್ಕು ದಿನ ಪೊಲೀಸರ ವಶಕ್ಕೆ ನೀಡಿ ಜೈಪುರ ನ್ಯಾಯಾಲಯವು ಆದೇಶಿಸಿದೆ.
ಭಾರತೀಯ ಸೇನೆಯ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಹಾಗೂ ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಡಿ ಝಬರಾರಾಮ್ ಎಂಬವರನ್ನು ರಾಜಸ್ಥಾನ ಪೊಲೀಸರ ಗುಪ್ತಚರ ವಿಭಾಗವು ಶುಕ್ರವಾರ ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯದ ಎದುರು ಶನಿವಾರ ಹಾಜರುಪಡಿಸಲಾಯಿತು.
‘ಆರೋಪಿಯು ಪಾಕಿಸ್ತಾನಿ ಹ್ಯಾಂಡ್ಲರ್‌ಗಳೊಂದಿಗೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದ. ಆರೋಪಿಯನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಹಣ ನೀಡುವುದಾಗಿ ಆಮಿಷವೊಡ್ಡಿ, ಆತನಿಂದ ರಹಸ್ಯ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ’ ಎಂದು ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಫುಲ್ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.