ADVERTISEMENT

ಕೊರೊನಾ ವೈರಸ್ | ಮನೆಯಲ್ಲೇ ಐಸೊಲೇಶನ್‌ ಮಾರ್ಗಸೂಚಿ

ಪಿಟಿಐ
Published 28 ಏಪ್ರಿಲ್ 2020, 21:22 IST
Last Updated 28 ಏಪ್ರಿಲ್ 2020, 21:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್‌ ಸೋಂಕಿನ ಆರಂಭಿಕ ಲಕ್ಷಣಗಳು ಕಾಣಿಸಿಕೊಂಡ ವ್ಯಕ್ತಿಗಳು ಅಗತ್ಯ ಸೌಲಭ್ಯಗಳನ್ನು ಹೊಂದಿದ್ದರೆ ಮನೆಯಲ್ಲಿಯೇ ಪ್ರತ್ಯೇಕವಾಗಿರಬಹುದು (ಐಸೊಲೇಶನ್‌) ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದ್ದು, ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳಬಹುದು ಎಂಬ ಹಂತದಲ್ಲಿರುವ ವ್ಯಕ್ತಿಗಳಿಗೂ ಈ ಮಾರ್ಗಸೂಚಿ ಅನ್ವಯವಾಗಲಿವೆ. ಆದರೆ, ಸೋಂಕಿನ ಲಕ್ಷಣಗಳು ಆರಂಭಿಕ ಅಥವಾ ಕಾಣಿಸಿಕೊಳ್ಳಬಹುದು ಎಂಬುದನ್ನು ವೈದ್ಯರು ದೃಢಪಡಿಸಬೇಕು ಎಂದು ಸಚಿವಾಲಯ ತಿಳಿಸಿದೆ.

ಇಂಥವರು ಪ್ರತಿದಿನ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗೆ ಮಾಹಿತಿ ನೀಡುವುದು ಕಡ್ಡಾಯ. ಇಂತಹ ವ್ಯಕ್ತಿಗಳನ್ನು ಉಪಚರಿಸುವ ಜವಾಬ್ದಾರಿ ಹೊತ್ತಿರುವವರು ವೈದ್ಯರ ಸಲಹೆ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಹೈಡ್ರಾಕ್ಸಿಕ್ಲೋರೊಕ್ವಿನ್‌ ಮಾತ್ರೆ ತೆಗೆದುಕೊಳ್ಳಬೇಕು ಎಂದೂ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.