ಸೋನಿಯಾ ಗಾಂಧಿ
(ಪಿಟಿಐ ಚಿತ್ರ)
ನವದೆಹಲಿ: ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಯು 'ನರಮೇಧ'ಕ್ಕೆ ಸಮಾನವಾಗಿದೆ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಗಾಜಾದಲ್ಲಿ ನಾಗರಿಕರ ಮೇಲೆ ನಡೆಸುತ್ತಿರುವ ಇಂಥ ಘೋರ ದೌರ್ಜನ್ಯದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 'ನಾಚಿಕೆಗೇಡಿನ ಮೌನ' ವಹಿಸಿದೆ. ಮಾನವೀಯತೆ ಮೇಲಿನ ಈ ಅವಮಾನಕ್ಕೆ ಮೂಕ ಪ್ರೇಕ್ಷಕರಾಗಿದ್ದು, ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ 'ನೈತಿಕ ಹೇಡಿತನದ ದ್ರೋಹ' ಎಂದು ಅವರು ಆರೋಪಿಸಿದ್ದಾರೆ.
ಹಿಂದಿ ದಿನಪತ್ರಿಕೆ 'ದೈನಿಕ್ ಜಾಗರಣ್'ನಲ್ಲಿ ಈ ಕುರಿತು ಸೋನಿಯಾ ಗಾಂಧಿ ಪ್ರಸ್ತಾಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 55 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೀನ್ ನಾಗರಿಕರು ಮೃತಪಟ್ಟಿದ್ದಾರೆ. ಇದರಲ್ಲಿ 17 ಸಾವಿರ ಮಕ್ಕಳೂ ಸೇರಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.
ಗಾಜಾಕ್ಕೆ ವೈದ್ಯಕೀಯ ನೆರವು, ಆಹಾರ ಸಾಮಗ್ರಿ ರಫ್ತು ಆಗುವುದನ್ನು ಇಸ್ರೇಲ್ ತಡೆ ಹಿಡಿದಿದೆ. ಅಲ್ಲಿನ ಮೂಲ ಸೌಕರ್ಯಗಳನ್ನು ಸಂಪೂರ್ಣವಾಗಿ ನಾಶ ಮಾಡಲಾಗಿದೆ. ಈ ಮಾನವೀಯ ಬಿಕ್ಕಟ್ಟಿನ ನಡುವೆಯೂ ಭಾರತ ಸರ್ಕಾರ ಮೂಕ ಪ್ರೇಕ್ಷಕನಾಗಿ ಉಳಿದಿರುವುದು ತೀವ್ರ ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.