ADVERTISEMENT

‘ವಂದೇ ಮಾತರಂ’, ‘ಭಾರತ್ ಮಾತಾ ಕಿ ಜೈ’ - ಇಸ್ರೇಲ್‌ನಿಂದ ಬಂದಿಳಿದ ಭಾರತೀಯರ ಜೈಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಅಕ್ಟೋಬರ್ 2023, 4:33 IST
Last Updated 13 ಅಕ್ಟೋಬರ್ 2023, 4:33 IST
<div class="paragraphs"><p>ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.</p></div>

ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.

   

ನವದೆಹಲಿ: ಇಸ್ರೇಲ್‌ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು (ಶುಕ್ರವಾರ) ಬೆಳಿಗ್ಗೆ ದೆಹಲಿಗೆ ಬಂದಿಳಿದಿದೆ.

‘ಆಪರೇಷನ್ ಅಜಯ್’ ಕಾರ್ಯಾಚರಣೆಯ ಅಡಿಯಲ್ಲಿ ಇಸ್ರೇಲ್‌ನಿಂದ ಹೊರಟ ಮೊದಲ ವಿಮಾನದಲ್ಲಿ 212 ಮಂದಿ ಭಾರತೀಯರನ್ನು ತಾಯ್ನಾಡಿಗೆ ವಾಪಸ್‌ ಕರೆತರಲಾಗಿದೆ.

ADVERTISEMENT

ಇಸ್ರೇಲ್‌ನಿಂದ ಹೊರಟ ವಿಮಾನವು ಇಂದು ಬೆಳಿಗ್ಗೆ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಪ್ರಯಾಣಿಕರನ್ನು ಬರಮಾಡಿಕೊಂಡಿದ್ದಾರೆ.

ಪ್ರಯಾಣದ ವೇಳೆ ಭಾರತೀಯರು ‘ವಂದೇ ಮಾತರಂ’, ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಇದರ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಇಸ್ರೇಲ್‌ನಿಂದ ಸ್ವದೇಶಕ್ಕೆ ಮರಳಲು ಬಯಸುವವರನ್ನು ಕರೆತರಲು ಕೇಂದ್ರ ಸರ್ಕಾರವು ‘ಆಪರೇಷನ್ ಅಜಯ್’ ಕಾರ್ಯಾಚರಣೆ ಆರಂಭಿಸಿದೆ. ‘ಹಮಾಸ್ ನಡೆಸಿದ ದಾಳಿಯನ್ನು ಭಯೋತ್ಪಾದಕ ದಾಳಿ ಎಂದು ಭಾರತ ಪರಿಗಣಿಸುತ್ತದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಹೇಳಿದ್ದಾರೆ.

‘ಸಾರ್ವಭೌಮ, ಸ್ವತಂತ್ರ ಪ್ಯಾಲೆಸ್ಟೀನ್‌ ದೇಶ ಸ್ಥಾಪನೆಯಾಗಬೇಕು’ ಎಂಬ ನಿಲುವನ್ನು ಭಾರತವು ಹಿಂದಿನಿಂದಲೂ ಹೊಂದಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.