ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸೇನಾ ಸಂಘರ್ಷ ನಂತರ ಭಾರತೀಯ ನಾಗರಿಕರ ಸುರಕ್ಷಿತ ಸ್ಥಳಾಂತರ ವಿಚಾರದಲ್ಲಿ ಭಾರತದ ವಿದೇಶಾಂಗ ಇಲಾಖೆ ಜತೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ಭಾರತದಲ್ಲಿನ ಇಸ್ರೇಲ್ ರಾಯಭಾರಿ ರುವೇನ್ ಅಜರ್ ತಿಳಿಸಿದ್ದಾರೆ.
‘ಭಾರತ ಸರ್ಕಾರದಿಂದ ಏನೇ ಸಂದೇಶ ಬಂದರೂ ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಗಂಭೀರವಾಗಿ ಪರಿಗಣಿಸಿದ್ದೇವೆ. ಯುದ್ಧ ಆರಂಭವಾದ ಕ್ಷಣದಿಂದಲೇ ಈ ಸಹಕಾರ ಮುಂದುವರಿದಿದೆ’ ಎಂದು ಅವರು ಶುಕ್ರವಾರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.
ಸಂಘರ್ಷ ಶುರುವಾಗುತ್ತಿದ್ದಂತೆ ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿತ್ತು. ಇಸ್ರೇಲ್‌ನ ಬೀರ್‌ಶೆಬಾ ಆಸ್ಪತ್ರೆ ಮೇಲೆ ಇರಾನ್ ಕ್ಷಿಪಣಿ ದಾಳಿ ಮಾಡುತ್ತಿದ್ದಂತೆ ವಾಪಸ್ ಬರಲು ಇಚ್ಚಿಸುವವರನ್ನು ‘ಆಪರೇಷನ್ ಸಿಂಧು’ ಮೂಲಕ ಸ್ಥಳಾಂತರಿಸಲು ಭಾರತ ಸರ್ಕಾರ ಬುಧವಾರ ನಿರ್ಧರಿಸಿತು ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.