
ರಾಹುಲ್ ಗಾಂಧಿ
ಪಿಟಿಐ ಚಿತ್ರ
ನವದೆಹಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷವು ತೀವ್ರ ಸ್ವರೂಪ ಪಡೆಯುತ್ತಿರುವುದು ಕಳವಳಕಾರಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಮಧ್ಯಪ್ರಾಚ್ಯದಲ್ಲಿರುವ ಪ್ರತಿಯೊಬ್ಬ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ರಕ್ಷಣೆಯು ನಮ್ಮ ಆದ್ಯತೆಯಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಈ ಕುರಿತು ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪರಮಾಣು ಒಪ್ಪಂದ ಮಾತುಕತೆಗೆ ಇರಾನ್ ಸ್ಪಂದಿಸಿದ ಕಾರಣ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ಇಂದು ದಾಳಿ ನಡೆಸಿವೆ. ಇರಾನ್ ಕೂಡ ಇಸ್ರೇಲ್ ಮೇಲೆ ಪ್ರತಿದಾಳಿ ನಡೆಸಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.