
ಈ ದಿನದ ಪ್ರಮುಖ 10 ಸುದ್ದಿಗಳು
ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಬೈರೂತ್: ಅಯತೊಲ್ಲಾ ಖಮೇನಿ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಇರಾನ್ ಬೆಂಬಲಿತ ಬಂಡುಕೋರ ಸಂಘಟನೆ ಹಿಜ್ಬುಲ್ಲಾ ಸೋಮವಾರ ಹೇಳಿದೆ.
ವಾಷಿಂಗ್ಟನ್: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಕೆ ಮಾಡಿತ್ತು ಎಂದು ರಾಯಿಟರ್ಸ್, ದಿ ಗಾರ್ಡಿಯನ್ ಸಹಿತ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.
ಟೆಹರಾನ್/ಜೆರುಸಲೇಮ್/ದುಬೈ: ಅಮೆರಿಕ ಹಾಗೂ ಇಸ್ರೇಲ್ ತನ್ನ ಮೇಲೆ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ಭಾನುವಾರ ದಾಳಿ ನಡೆಸಿದೆ. ಇಸ್ರೇಲ್ ಕೇಂದ್ರ ಭಾಗದ ನಗರ ಬೆಟ್ ಶೆಮೆಷ್ ಮೇಲೆ ಇರಾನ್ ನಡೆಸಿದ ಕ್ಷಿಪಣಿಗಳ ದಾಳಿಯಲ್ಲಿ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಯಲ್ಲಿ ‘ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿ’ ಒಂದೂ ಇಲ್ಲ ಎಂಬ ಅಂಶ ಹೊರಬಿದ್ದಿದೆ. ಇದು, ಈ ‘ಸಾಮಾಜಿಕ ಪಿಡುಗು’ ನಿಂತಿಲ್ಲದಿರುವುದಕ್ಕೆ ಕನ್ನಡಿ ಹಿಡಿದಿದೆ.
ದೇವನಹಳ್ಳಿ: ಇರಾನ್–ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವುದರೊಂದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ 37 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ನವದೆಹಲಿ: ಪಶ್ಚಿಮ ಎಷ್ಯಾದಲ್ಲಿ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆ ಚರ್ಚಿಸಿದ್ದಾರೆ.
ಬೆಂಗಳೂರು: ಪಶ್ಚಿಮ ಏಷ್ಯಾ ಮತ್ತು ಕೊಲ್ಲಿ ದೇಶಗಳ ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರು ಆಯಾ ದೇಶಗಳ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ.
ನವದೆಹಲಿ: ಫೆಬ್ರುವರಿ ತಿಂಗಳಿನಲ್ಲಿ ವಾಹನಗಳ ಮಾರಾಟವು ಏರಿಕೆ ಕಂಡಿದೆ. ಗ್ರಾಹಕರಿಂದ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದು, ಹೊಸ ಮಾದರಿಯ ವಾಹನಗಳ ಬಿಡುಗಡೆ, ವಾಹನಗಳಲ್ಲಿನ ಸುಧಾರಿತ ತಂತ್ರಜ್ಞಾನ ಸೇರಿದಂತೆ ವಿವಿಧ ಅಂಶಗಳು ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಕಂಪನಿಗಳು ತಿಳಿಸಿವೆ.
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆಗಳಿಂದ ಪ್ರಯಾಣದ ಯೋಜನೆಗಳಲ್ಲಿ ವ್ಯತ್ಯಾಸವಾಗಿರುವ ವಿದೇಶಿ ಪ್ರಜೆಗಳಿಗೆ ವೀಸಾ ವಿಸ್ತರಣೆ ಅಥವಾ ದೇಶದಲ್ಲಿ ತಮ್ಮ ವಾಸ್ತವ್ಯವನ್ನು ಕ್ರಮಬದ್ಧಗೊಳಿಸಲು ಹತ್ತಿರದ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿಯನ್ನು (ಎಫ್‌ಆರ್‌ಆರ್‌ಒ) ಸಂಪರ್ಕಿಸುವಂತೆ ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.
ಕೋಲ್ಕತ್ತ: ಅತ್ಯಗತ್ಯ ಸಂದರ್ಭದಲ್ಲಿ ಮರಳಿ ಅರಳಿದ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್‌ನಿಂದಾಗಿ ‘ಹಾಲಿ ಚಾಂಪಿಯನ್’ ಭಾರತ ತಂಡವು ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.