
ನವದೆಹಲಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬುಧವಾರ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ಗಾಜಾ ಪಟ್ಟಿಯಲ್ಲಿ ಶಾಂತಿ ಮರುಸ್ಥಾಪನೆಗೆ ನಡೆಯುತ್ತಿರುವ ಪ್ರಯತ್ನಗಳನ್ನು ವಿವರಿಸಿದ್ದಾರೆ. ಇದೇ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್‌ನ ದೃಢ ಸಂಕಲ್ಪವನ್ನು ಅವರು ಪುನರುಚ್ಚರಿಸಿದ್ದಾರೆ.
‘ಉಭಯ ದೇಶಗಳ ನಾಯಕರು ಪರಸ್ಪರ ಹೊಸ ವರ್ಷದ ಶುಭಾಶಯ ಕೋರಿ, ಎರಡೂ ದೇಶಗಳ ಜನತೆಗೆ ಶಾಂತಿ, ಸಮೃದ್ಧಿಯನ್ನು ಹಾರೈಸಿದರು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
‘ಗಾಜಾ ಪಟ್ಟಿಯಲ್ಲಿ ಇಸ್ರೇಲ್ ಜಾರಿಗೆ ತರಲು ಉದ್ದೇಸಿರುವ ಶಾಂತಿ ಯೋಜನೆ ಕುರಿತು ನೆತನ್ಯಾಹು, ಮೋದಿ ಅವರಿಗೆ ವಿವರಿಸಿದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರ ವೃದ್ಧಿಯ ಬಗ್ಗೆಯೂ ಮಾತುಕತೆ ನಡೆಯಿತು’ ಎಂದು ಪ್ರಕಟಣೆ ವಿವರಿಸಿದೆ.
‘ಮಾತುಕತೆ ವೇಳೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇಸ್ರೇಲ್‌ನ ಶೂನ್ಯ ಸಹನೆ ನೀತಿಯನ್ನು ಅಲ್ಲಿನ ಪ್ರಧಾನಿ ಮತ್ತೆ ಒತ್ತಿ ಹೇಳಿದ್ದಾರೆ. ನನ್ನ ಸ್ನೇಹಿತನೊಂದಿಗೆ ಮಾತನಾಡಿ ಸಂತೋಷವಾಯಿತು’ ಎಂದು ಪ್ರಧಾನಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.