ಇಸ್ರೊ ಅಧ್ಯಕ್ಷ ವಿ. ನಾರಾಯಣನ್
ಪಿಟಿಐ ಚಿತ್ರ
ನವದೆಹಲಿ: ದೇಶದ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಕಾರ್ಯತಂತ್ರದ ಉದ್ದೇಶಕ್ಕಾಗಿ ಕನಿಷ್ಠ 10 ಉಪಗ್ರಹಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಅಧ್ಯಕ್ಷ ವಿ. ನಾರಾಯಣನ್ ಅವರು ಹೇಳಿದ್ದಾರೆ.
‘ನಮ್ಮ ನೆರೆಹೊರೆಯ ದೇಶಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಾಗಿ ನಮ್ಮ ದೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕಾದರೆ ಉಪಗ್ರಹಗಳ ಬಳಕೆ ಅತಿ ಅವಶ್ಯಕ. ನಮ್ಮ 7 ಸಾವಿರ ಕಿ.ಮೀ ಸಮುದ್ರ ತೀರ ಪ್ರದೇಶಗಳನ್ನು ಹಾಗೂ ಉತ್ತರ ಭಾಗವನ್ನು ಸಂಪೂರ್ಣವಾಗಿ ಮೇಲ್ವಿಚಾರಣೆ ಮಾಡಬೇಕು. ಇದನ್ನು ಉಪಗ್ರಹ ಮತ್ತು ಡ್ರೋನ್ ತಂತ್ರಜ್ಞಾನವಿಲ್ಲದೆ ಸಾಧಿಸಲು ಸಾಧ್ಯವಿಲ್ಲ’ ಎಂದು ನಾರಾಯಣನ್ ಹೇಳಿದ್ದಾರೆ.
ಮಣಿಪುರದ ಇಂಫಾಲ್‌ನಲ್ಲಿ ನಡೆದ ಕೇಂದ್ರ ಕೃಷಿ ವಿಶ್ವವಿದ್ಯಾಲಯದ 5 ನೇ ಘಟಿಕೋತ್ಸವದಲ್ಲಿ ಭಾಗವಹಿಸಿದ್ದ ವೇಳೆ ನಾರಾಯಣನ್ ಈ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.