ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 2 ಶನಿವಾರ 2023

ಪ್ರಜಾವಾಣಿ ವಿಶೇಷ
Published 2 ಸೆಪ್ಟೆಂಬರ್ 2023, 13:09 IST
Last Updated 2 ಸೆಪ್ಟೆಂಬರ್ 2023, 13:09 IST
   

ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..

Aditya-L1 Launch | ಸೂರ್ಯನತ್ತ ಇಸ್ರೊ; ಆದಿತ್ಯ-ಎಲ್1 ಉಡ್ಡಯನ

<div class="paragraphs"><p></p></div>

ಸೂರ್ಯನ ಬಾಹ್ಯ ವಾತಾವರಣದ ಅಧ್ಯಯನಕ್ಕಾಗಿ 'ಆದಿತ್ಯ–ಎಲ್‌ 1' ಬಾಹ್ಯಾಕಾಶ ನೌಕೆಯನ್ನು ಇಸ್ರೊ ಯಶಸ್ವಿಯಾಗಿ ಉಡ್ಡಯನಗೊಳಿಸಿದೆ. ನೌಕೆಯು ಯಶಸ್ವಿಯಾಗಿ ನಿಗದಿತ ಕಕ್ಷೆ ಸೇರಿದೆ.

ADVERTISEMENT

G20 Summit 2023: ಸೆ.8ರಂದು ಮೋದಿ-ಬೈಡನ್ ಮಾತುಕತೆ

ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಪಾಲ್ಗೊಳ್ಳಲಿದ್ದಾರೆ. ಅವರು ಸೆಪ್ಟೆಂಬರ್ 7ರಂದು ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತಭವನವು ತಿಳಿಸಿದೆ.

ಕಾವೇರಿ ನೀರು ಹಂಚಿಕೆ ವಿವಾದ: ಕೇಂದ್ರ ಮಧ್ಯ ಪ್ರವೇಶಕ್ಕೆ ಸಿಎಂ ಒತ್ತಾಯ

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಗಾಂಧಿ ಜಯಂತಿ | ಇಂಡಿಯಾ ಒಕ್ಕೂಟದಿಂದ ದೇಶದಾದ್ಯಂತ ಕಾರ್ಯಕ್ರಮ

'ಇಂಡಿಯಾ' ಮೈತ್ರಿಕೂಟವು ಮಹಾತ್ಮ ಗಾಂಧಿ ಅವರ ಜನ್ಮದಿನದ ಪ್ರಯುಕ್ತ ಆಕ್ಟೋಬರ್‌ 2ರಂದು ದೇಶದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ಹೇಳಿದ್ದಾರೆ.

Asia Cup | IND vs PAK: ಉತ್ತಮ ಮೊತ್ತದತ್ತ ಭಾರತ

ಏಷ್ಯಾಪಕ್‌ ಏಕದಿನ ಕ್ರಿಕೆಟ್‌ ಟೂರ್ನಿಯ ಮೂರನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿವೆ. ಭಾರತ ತಂಡ 36 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್‌ಗಳನ್ನು ಕಳೆದುಕೊಂಡು 187 ರನ್ ಗಳಿಸಿದ್ದು, ಸವಾಲಿನ ಮೊತ್ತದತ್ತ ಮುನ್ನಡೆದಿದೆ. ಇಶಾನ್ ಕಿಶನ್‌ (75) ಮತ್ತು ಹಾರ್ದಿಕ್‌ ಪಾಂಡ್ಯ (56) ಕ್ರೀಸ್‌ನಲ್ಲಿದ್ದಾರೆ.

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ಸಂಸದ ಸಂಗಣ್ಣ ಕರಡಿ ಗರಂ

ಲೋಕಸಭಾ ಚುನಾವಣೆಗೆ ಸಾಕಷ್ಟು ಸಮಯವಿದ್ದರೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಂಟು ಜನ ಸಂಸದರಿಗೆ ಟಿಕೆಟ್‌ ಇಲ್ಲವೆಂದು ಹೇಳುತ್ತಿದ್ದಾರೆ. ಅವರು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ; ಪಕ್ಷ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಆಗ್ರಹಿಸಿದರು.

ಆಲಮಟ್ಟಿ: ತುಂಬಿದ ಕೃಷ್ಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಂಬಿದ ಕೃಷ್ಣಾ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.

ಕೋಟಕ್ ಮಹೀಂದ್ರಾ ಬ್ಯಾಂಕ್: ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

ಕೋಟಕ್‌ ಮಹೀಂದ್ರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸ್ಥಾನಕ್ಕೆ ಉದಯ್‌ ಕೋಟಕ್‌ ಅವರು ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಬೀಳಲಿದೆ ಕಾದು ನೋಡಿ ಎಂದ ಈಶ್ವರಪ್ಪ

'ಲೋಕಸಭಾ ಚುನಾವಣೆಗೆ ಮುನ್ನ ಅಥವಾ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರೊಲ್ಲ' ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಜ್ಞಾನವಾಪಿ ಮಸೀದಿ: ವೈಜ್ಞಾನಿಕ ಸಮೀಕ್ಷೆಗೆ ಮತ್ತೆ 8 ವಾರ ಸಮಯ ಕೇಳಿದ ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ವಾರಾಣಸಿಯಲ್ಲಿನ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಮತ್ತೆ ಎಂಟು ವಾರ ಸಮಾವಕಾಶ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.