ADVERTISEMENT

ಆದಾಯ ತೆರಿಗೆ ಪ್ರಕರಣ: ಡಿ.4ಕ್ಕೆ ವಿಚಾರಣೆ

ಪಿಟಿಐ
Published 13 ನವೆಂಬರ್ 2018, 17:16 IST
Last Updated 13 ನವೆಂಬರ್ 2018, 17:16 IST

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಆದಾಯ ತೆರಿಗೆ ಪ್ರಕರಣದ ಅಂತಿಮ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 4ಕ್ಕೆ ನಿಗದಿಪಡಿಸಿದೆ.

2011–12ರ ಆದಾಯ ತೆರಿಗೆ ಪರಿಶೀಲನೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಸೆ.10ರಂದು ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಸೋನಿಯಾ ಮತ್ತು ರಾಹುಲ್‌ ಅವರ ದಾಖಲೆಗಳನ್ನು ಪರಿಶೀಲಿಸಲು ಆದಾಯ ತೆರಿಗೆ ಇಲಾಖೆಗೆ ಹೈಕೋರ್ಟ್‌ ಅವಕಾಶ ನೀಡಿತ್ತು. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿನ ಆದಾಯ ತೆರಿಗೆ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ರಾಹುಲ್‌, ಸೋನಿಯಾ ಜತೆ ಕಾಂಗ್ರೆಸ್‌ ನಾಯಕ ಆಸ್ಕರ್‌ ಫರ್ನಾಂಡಿಸ್‌ ಸಹ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಿರಿಯ ವಕೀಲರಾದ ಪಿ. ಚಿದಂಬರಂ, ಕಪಿಲ್‌ ಸಿಬಲ್‌ ಮತ್ತು ಅರವಿಂದ ದಾತರ್‌ ಅವರು ಕಾಂಗ್ರೆಸ್ ನಾಯಕರ ಪರ ಹಾಜರಾಗಿದ್ದರು.

ADVERTISEMENT

ಆದಾಯ ತೆರಿಗೆ ಇಲಾಖೆಯು ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೆವಿಯಟ್‌ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.