ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿರುವ (ಎನ್‌ಸಿಆರ್) ಎರಡು ರಿಯಲ್ ಎಸ್ಟೇಟ್ ಉದ್ಯಮ ಸಮೂಹಗಳಿಗೆ ಸೇರಿದ ಸ್ಥಳಗಳ ಮೇಲೆ ನಡೆಸಿದ ದಾಳಿಯಲ್ಲಿ, ₹ 400 ಕೋಟಿ ಮೊತ್ತದ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಬುಧವಾರ ತಿಳಿಸಿದೆ.
ವಾಣಿಜ್ಯ ಹಾಗೂ ವಸತಿ ಕಟ್ಟಡಗಳ ನಿರ್ಮಾಣದಲ್ಲಿ ತೊಡಗಿರುವ ಈ ಸಮೂಹಗಳ ಮೇಲೆ ನ. 17ರಂದು ದಾಳಿ ನಡೆಸಲಾಗಿತ್ತು. ದಾಳಿ ಸಂದರ್ಭದಲ್ಲಿ ₹ 10 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಇಲಾಖೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
‘ಈ ಎರಡು ಸಂಸ್ಥೆಗಳು, ಬಹಿರಂಗಪಡಿಸದ ಆದಾಯದ ಮೇಲಿನ ತೆರಿಗೆಯೂ ಸೇರಿದಂತೆ ಭಾರಿ ಪ್ರಮಾಣದಲ್ಲಿ ತೆರಿಗೆ ವಂಚನೆ ಮಾಡಿರುವುದು ಕಂಡುಬಂದಿದೆ’ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.