ADVERTISEMENT

ಬಂಗಾಳದಲ್ಲಿ ಪ್ರಧಾನಿ ರ‍್ಯಾಲಿಯಲ್ಲಿ ಗಂಗೂಲಿ ಭಾಗವಹಿಸುತ್ತಾರೆಯೇ?

ಪಿಟಿಐ
Published 3 ಮಾರ್ಚ್ 2021, 3:22 IST
Last Updated 3 ಮಾರ್ಚ್ 2021, 3:22 IST
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ   

ಕೋಲ್ಕತ್ತ: ಮಾರ್ಚ್ 7ರಂದು ಪ್ರಧಾನಿ ನರೇಂದ್ರ ಮೋದಿ ರ‍್ಯಾಲಿಯಲ್ಲಿ ಭಾಗವಹಿಸಬೇಕೋ ಬೇಡವೋ ಎಂಬುದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಬಿಟ್ಟ ವಿಚಾರ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಅಭಿಪ್ರಾಯಪಟ್ಟಿದೆ.

ಪ್ರಧಾನಿ ಮೋದಿ ಅವರ ರ‍್ಯಾಲಿಯಲ್ಲಿ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಪಾಲ್ಗೊಳ್ಳಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಊಹಾಪೋಹಾಗಳು ಹರಿದಾಡುತ್ತಿದೆ.

ಹಾಗೊಂದು ವೇಳೆ ಆರೋಗ್ಯ ಹಾಗೂ ವಾತಾವರಣ ಹೊಂದಿಕೆಯಾಗಿ ಭಾರತೀಯ ಮಾಜಿ ಕ್ರಿಕೆಟಿಗ ರ‍್ಯಾಲಿಯಲ್ಲಿ ಭಾಗವಹಿಸುವುದಾದರೆ ಅವರಿಗೆ ಸ್ವಾಗತವನ್ನುಕೋರಲಿದ್ದೇವೆ ಎಂದು ಬಿಜೆಪಿ ವಕ್ತಾರ ಶಮಿಕ್ ಭಟ್ಟಾಚಾರ್ಯ ಕೋಲ್ಕತ್ತದಲ್ಲಿ ವರದಿಗಾರರಿಗೆ ತಿಳಿಸಿದರು.

ADVERTISEMENT

ಸೌರವ್ ಗಂಗೂಲಿ ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬ ವಿಚಾರ ನಮಗೆ ತಿಳಿದಿದೆ. ಪ್ರಧಾನಿ ಕಾರ್ಯಕ್ರಮದಲ್ಲಿ ಗಂಗೂಲಿ ಇರುವಿಕೆಯನ್ನುಎಲ್ಲರೂ ಇಷ್ಟಪಡಲಿದ್ದಾರೆ ಎಂದು ಹೇಳಿದರು.

ಆದರೆ ತಕ್ಷಣಕ್ಕೆ ಸೌರವ್ ಗಂಗೂಲಿ ಅವರಿಂದ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿಲ್ಲ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಸೌರವ್ ಗಂಗೂಲಿ ರಾಜಕೀಯಕ್ಕೆ ಪ್ರವೇಶಿಸುತ್ತಾರೆ ಎಂಬ ಬಗ್ಗೆ ವರದಿಗಳು ಬಂದಿದ್ದವು.

ಜನವರಿ 28ರಂದು ಸೌರವ್ ಗಂಗೂಲಿ ಅವರಿಗೆ ಎರಡನೇ ಬಾರಿಗೆ ಯಶಸ್ವಿಯಾಗಿ ಆ್ಯಂಜಿಯೊಪ್ಲಾಸ್ಟಿ ನಡೆಸಿರುವ ವೈದ್ಯರು, ಮತ್ತೆರಡು ಸ್ಟಂಟ್ ಆಳವಡಿಸಿದ್ದರು. ಬಳಿಕ ಜನವರಿ 31ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದರು.

ಜನವರಿ 2ರಂದು ಸೌರವ್ ಗಂಗೂಲಿ ಮೊದಲ ಬಾರಿಗೆ ಲಘು ಹೃದಯಾಘಾತಕ್ಕೆ ಒಳಗಾಗಿದ್ದರು. ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.