ADVERTISEMENT

ಬಿಜೆಪಿ ಮುಖಂಡನ ವ್ಯಾಪಾರ ಸಂಸ್ಥೆಗಳ ಮೇಲೆ ಐ.ಟಿ ದಾಳಿ

ಪಿಟಿಐ
Published 12 ಜನವರಿ 2019, 20:07 IST
Last Updated 12 ಜನವರಿ 2019, 20:07 IST

ಡೆಹ್ರಾಡೂನ: ಬಿಜೆಪಿ ಮುಖಂಡ ಅನಿಲ್ ಗೋಯಲ್ ಮತ್ತು ಅವರ ಕುಟುಂಬಕ್ಕೆ ಸೇರಿದ ಉತ್ತರಾಖಂಡ ಮತ್ತು ಹರಿಯಾಣ ರಾಜ್ಯದಲ್ಲಿನ 13 ವ್ಯಾಪಾರ ಸಂಸ್ಥೆಗಳ ಮೇಲೆ ಆದಾಯ ತೆರಿಗೆ(ಐ.ಟಿ) ಇಲಾಖೆ ಶುಕ್ರವಾರ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

2016ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಗೋಯಲ್ ಅಭ್ಯರ್ಥಿಯಾಗಿದ್ದರು. ಬಿಜೆಪಿ ಹಿರಿಯ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಡೆಹ್ರಾಡೂನ್‌ ಮೇಯರ್ ಹುದ್ದೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಟಿಕೆಟ್‌ಕೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT