ADVERTISEMENT

ಇಂದಿರಾ ಗಾಂಧಿ ಮರಳಿ ಬಂದಂತಾಗಿದೆ: ಕಾಂಗ್ರೆಸ್ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 12:28 IST
Last Updated 11 ಫೆಬ್ರುವರಿ 2019, 12:28 IST
   

ನವದೆಹಲಿ: ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುವ ಮೂಲಕ ಪ್ರಿಯಾಂಕಾ ಗಾಂಧಿ ವಾದ್ರಾ ಸಕ್ರಿಯ ರಾಜಕಾರಣಕ್ಕಿಳಿದ್ದಾರೆ.

ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹೊಣೆ ಹೊತ್ತ ನಂತರ ಲಖನೌದಲ್ಲಿ ರೋಡ್ ಶೋ ನಡೆಸಿರುವ 47 ರ ಹರೆಯದ ಪ್ರಿಯಾಂಕಾಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಅಭೂತಪೂರ್ವ ಸ್ವಾಗತ ಲಭಿಸಿದೆ.

ಇಂದಿರಾ ಗಾಂಧಿ ಮರಳಿ ಬಂದಂತಾಗಿದೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಬೆಂಬಲಿಗ ಫೈಜಲ್ ಅಹಮದ್ ಖಾನ್ ಹೇಳಿದ್ದಾರೆ. ಈ ರಾಜ್ಯದ ರೈತರು ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಸ್ಥಾನದಲ್ಲಿಯೂ ಪ್ರಿಯಾಂಕಾ ಗಾಂಧಿಯನ್ನು ಮುಖ್ಯಮಂತ್ರಿ ಸ್ಥಾನದಲ್ಲಿಯೂ ಕಾಣಲು ಬಯಸಿದ್ದಾರೆ ಎಂದು ಫೈಜಲ್ ಹೇಳಿದ್ದಾರೆ.

ADVERTISEMENT

ಅವಳನ್ನು ಜಾಗ್ರತೆಯಿಂದ ನೋಡಿಕೊಳ್ಳಿ
ಉತ್ತರ ಪ್ರದೇಶದಲ್ಲಿ ರೋಡ್ ಶೋ ನಡೆಸುತ್ತಿರುವ ನನ್ನ ಉತ್ತಮ ಗೆಳತಿ, ಪರ್ಫೆಕ್ಟ್ ಪತ್ನಿ ಮತ್ತು ನನ್ನ ಮಕ್ಕಳ ಉತ್ತಮ ತಾಯಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರೋಬರ್ಟ್ ವಾದ್ರಾ ಅವರು ಉತ್ತರ ಪ್ರದೇಶದ ಜನರಲ್ಲಿ ಹೇಳಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.