ಚೆನ್ನೈ: ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವ ಪ್ರಕ್ರಿಯೆಗೆ ತಮಿಳುನಾಡು ಸರ್ಕಾರ ಚಾಲನೆ ನೀಡಿದೆ.
ಜಯಲಲಿತಾ ಅವರ ಮೂರಂತಸ್ತಿನ ‘ವೇದ ನಿಲಯಂ’ ನಿವಾಸವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಮರಿನಾ ಬೀಚ್‌ನಲ್ಲಿ ಜಯಲಲಿತಾ ಸಮಾಧಿ ಇರುವಲ್ಲಿ ₹ 50 ಕೋಟಿ ವೆಚ್ಚದಲ್ಲಿ ಈಗಾಗಲೇ ಸ್ಮಾರಕ ನಿರ್ಮಿಸಲಾಗುತ್ತಿದೆ.
ಪೋಸ್ ಗಾರ್ಡನ್ ಪ್ರದೇಶದಲ್ಲಿರುವ ಮನೆಯನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಚೆನ್ನೈ ಆಡಳಿತ ಬುಧವಾರ ಅಧಿಸೂಚನೆ ಹೊರಡಿಸಿದೆ. ಈ ನಿವಾಸದ ಉತ್ತರಾಧಿಕಾರಿ ಯಾರೆಂಬುದು ಇನ್ನೂ ದೃಢಪಟ್ಟಿಲ್ಲ ಎಂದೂ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.