ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ, ಉಗ್ರನಿಗೆ ಸೇರಿದ್ದ ಮನೆಯೊಂದನ್ನು ಅಧಿಕಾರಿಗಳು ಶನಿವಾರ ನೆಲಸಮಗೊಳಿಸಿದ್ದಾರೆ.
ಪೊಲೀಸರು ಜಿಲ್ಲಾಡಳಿತದ ಸಹಯೋಗದಲ್ಲಿ ಮನೆಯನ್ನು ನೆಲಸಮಗೊಳಿಸಿದ್ದಾರೆ. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ಈ ಮನೆ ನಿರ್ಮಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ನಿಷೇಧಿತ ಲಷ್ಕರ್–ಎ–ತಯಬಾ (ಎಲ್‌ಇಟಿ) ಸಂಘಟನೆಯೊಂದಿಗೆ ನಂಟು ಹೊಂದಿರುವ, ಹಾರೂನ್ ರಶೀದ್ ಗನಿ ಎಂಬ ಉಗ್ರನಿಗೆ ಸೇರಿದ ಮನೆ ಇದಾಗಿತ್ತು. ಈತ 2018ರಿಂದ ಪಾಕಿಸ್ತಾನದಲ್ಲಿದ್ದುಕೊಂಡು ಭಾರತದಲ್ಲಿ ಉಗ್ರ ಚಟುವಟಿಕೆಗಳನ್ನು ನಡೆಸುತ್ತಿದ್ದಾನೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.