ಒಮರ್ ಅಬ್ದುಲ್ಲಾ
ಶ್ರೀನಗರ: ಪಾಕಿಸ್ತಾನ ಸೇನೆಯು ಗಡಿಯಲ್ಲಿ ತೀವ್ರ ಶೆಲ್ ದಾಳಿ ನಡೆಸುತ್ತಿದ್ದು, ಸ್ಥಿತಿ–ಗತಿಗಳ ಕುರಿತು ಅವಲೋಕಿಸಲು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಸಭೆ ನಡೆಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಬ್ದುಲ್ಲಾ ಅವರು, ‘ಗಡಿ ಭಾಗದ ಜನರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸಂಘಟಿತವಾಗಿ ಕೆಲಸ ಮಾಡುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಅಗತ್ಯವಿರುವವರಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ನೀಡಲು ಸಿಬ್ಬಂದಿಯನ್ನು ತಯಾರುಗೊಳಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಗಡಿಯಲ್ಲಿನ ನಿವಾಸಿಗಳ ರಕ್ಷಣೆಗೆ ಭದ್ರತೆ ಹೆಚ್ಚಳ ಹಾಗೂ ತುರ್ತು ಸಂದರ್ಭದಲ್ಲಿ ಕ್ಷಿಪ್ರ ಕಾರ್ಯಾಚರಣೆ ಕೈಗೊಳ್ಳುವ ಸಂಬಂಧ ಒಮರ್ ಅಬ್ದುಲ್ಲಾ ಅವರು ಬುಧವಾರವೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.