ADVERTISEMENT

ಜಮ್ಮು | ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2024, 4:17 IST
Last Updated 18 ಡಿಸೆಂಬರ್ 2024, 4:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮನೆಯೊಂದರಲ್ಲಿ ಇಂದು (ಬುಧವಾರ) ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಅಸ್ವಸ್ಥಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪ‍ತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಕಥುವಾದ ಶಿವನಗರದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸುಟ್ಟಗಾಯಗಳು ವರದಿಯಾಗಿಲ್ಲ, ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.