ADVERTISEMENT

ಉಗ್ರರ ದಾಳಿ: ಪರಿಹಾರ ವಿತರಣೆ ನೆರವಿಗೆ ವೆಬ್‌ ಪೋರ್ಟಲ್‌ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 14:29 IST
Last Updated 22 ಜುಲೈ 2025, 14:29 IST
<div class="paragraphs"><p>ಹಣ </p></div>

ಹಣ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬಲಿಪಶುವಾದ ವ್ಯಕ್ತಿಗಳ ಕುಟುಂಬಗಳಿಗೆ ತ್ವರಿತವಾಗಿ ಪರಿಹಾರ ವಿತರಿಸಲು ಮತ್ತು ಅವರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ಕಲ್ಪಿಸಲು ಅನುಕೂಲವಾಗುವಂತೆ ವೆಬ್‌ ಪೋರ್ಟಲ್‌ ಅಭಿವೃದ್ಧಿಪಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಮಂಗಳವಾರ ಈ ಪೋರ್ಟಲ್‌ಗೆ ಚಾಲನೆ ನೀಡಿದರು. 

‘ಕೇಂದ್ರ ಗೃಹ ಸಚಿವಾಲಯವು, ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಈ ಪೋರ್ಟಲ್‌ ಅಭಿವೃದ್ಧಿಪಡಿಸಿದೆ. ಉಗ್ರರ ದಾಳಿಯಿಂದ ನಲುಗಿದ ಕುಟುಂಬಗಳಿಗೆ ನೆರವು ಕಲ್ಪಿಸಲು ಬೇಕಿರುವ ಸಮಗ್ರ ದತ್ತಾಂಶವು ಈ ಪೋರ್ಟಲ್‌ನಲ್ಲಿ ಲಭಿಸಲಿದೆ‘ ಎಂದು ಮನೋಜ್‌ ಸಿನ್ಹಾ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.   

ADVERTISEMENT

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಬಲಿಪಶುಗಳಾದ 40ಕ್ಕೂ ಹೆಚ್ಚು ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಜುಲೈ 13ರಂದು ಬಾರಾಮುಲ್ಲಾದಲ್ಲಿ ಉದ್ಯೋಗ ನೇಮಕಾತಿ ಪತ್ರಗಳನ್ನು ಸಿನ್ಹಾ ವಿತರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.