ADVERTISEMENT

ಎಲ್‌ಒಸಿ: ಕದನವಿರಾಮ ಉಲ್ಲಂಘಿಸಿದ ಪಾಕ್‌

ಪಿಟಿಐ
Published 20 ಫೆಬ್ರುವರಿ 2026, 16:16 IST
Last Updated 20 ಫೆಬ್ರುವರಿ 2026, 16:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು–ಕಾಶ್ಮೀರದ ಕುಪ್ವಾಡ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಪಾಕಿಸ್ತಾನವು ಶುಕ್ರವಾರ ಕದನ ವಿರಾಮವನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕುಪ್ವಾಡದ ನೊವ್ಗಾಮ್‌ ಸೆಕ್ಟರ್‌ನ ಟಿಎಂಜಿ ಬಳಿ ಶುಕ್ರವಾರ ಮಧ್ಯಾಹ್ನದ ವೇಳೆ ಭಾರತದ ಸೇನಾ ನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಸೇನಾ ನೆಲೆಯಿಂದ ಸಣ್ಣ ಶಸ್ತ್ರಾಸ್ತ್ರಗಳನ್ನು ಬಳಸಿ ಗುಂಡಿನ ದಾಳಿ ನಡೆಸಲಾಗಿದೆ. ಕೆಲ ಸಮಯದ ಬಳಿಕ ಈ ದಾಳಿ ನಿಂತಿದೆ. ಘಟನೆಯಿಂದ ಯಾವುದೇ ಸಾವು -ನೋವು ಸಂಭವಿಸಿಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT