
ಪಿಟಿಐ
ಸಾವು (ಪ್ರಾತಿನಿಧಿಕ ಚಿತ್ರ)
ಜಮ್ಮು: ಜಮ್ಮು–ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ಯಾರಾಟ್ರೂಪರ್ ಹವಾಲ್ದಾರ್ ಗಜೇಂದ್ರ ಸಿಂಗ್ ಸೋಮವಾರ ಮೃತಪಟ್ಟಿದ್ದಾರೆ.
ಸೊನ್ನಾರ್ ಗ್ರಾಮದಲ್ಲಿ ಚಳಿಗಾಲಕ್ಕೆ ಅಗತ್ಯ ಇರುವ ಆಹಾರ ಸಾಮಗ್ರಿಯ ಸಮೇತ ಭಯೋತ್ಪಾದಕರು ಅಡಗಿ ಕುಳಿತಿರುವ ಮಾಹಿತಿ ಆಧರಿಸಿ ಭಾನುವಾರ ಕಾರ್ಯಾಚರಣೆ ಆರಂಭಗೊಂಡಿತ್ತು. ‘ಆಪರೇಷನ್ ತ್ರಾಶಿ–1‘ ಹೆಸರಿನಲ್ಲಿ ಸೋಮವಾರವೂ ಕಾರ್ಯಾಚರಣೆ ನಡೆಯಿತು. ಯೋಧರು, ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪಾಕಿಸ್ತಾನ ಮೂಲದ ಜೈಷ್ ಇ ಮೊಹಮ್ಮದ್ (ಜೆಇಎಂ)ನ ಇಬ್ಬರು ಅಥವಾ ಮೂವರು ಉಗ್ರರು ಅಡಗಿ ಕುಳಿತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.