ADVERTISEMENT

ಜಮ್ಮು–ಕಾಶ್ಮೀರ: ಗಾಯಗೊಂಡಿದ್ದ ಪೊಲೀಸ್‌ ಅಧಿಕಾರಿ ಸಾವು

ಪಿಟಿಐ
Published 16 ಜೂನ್ 2019, 20:39 IST
Last Updated 16 ಜೂನ್ 2019, 20:39 IST

ನವದೆಹಲಿ: ಜಮ್ಮು–ಕಾಶ್ಮೀರದ ಅನಂತನಾಗ್‌ದಲ್ಲಿ ಉಗ್ರರು ನಡೆಸಿದ್ದ ಆತ್ಮಾಹುತಿ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್‌ ಅಧಿಕಾರಿ ಅರ್ಷದ್‌ ಅಹ್ಮದ್‌ ಖಾನ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಬುಧವಾರ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಅರ್ಷದ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಭಾನುವಾರ ಬೆಳಿಗ್ಗೆ ಕರೆತರಲಾಗಿತ್ತು. ಆದರೆ, ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಮೃತಪಟ್ಟರು ಎಂದು ಸೇನಾ ಮೂಲಗಳು ತಿಳಿಸಿವೆ.

ಈ ದಾಳಿಯಲ್ಲಿ ಸಿಆರ್‌ಪಿಎಫ್‌ನ ಐವರು ಯೋಧರು ಹುತಾತ್ಮರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.