
ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆ ಗುಪ್ತ ದಳದ ಅಧಿಕಾರಿಗಳು ಏಳು ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದು, ಭಯೋತ್ಪಾದನಾ ಚಟುವಟಿಕಗಳಿಗೆ ಬೆಂಬಲ ನೀಡುತ್ತಿದ್ದ ಆರೋಪದಡಿ 12 ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.
ಶ್ರೀನಗರ, ಬಾರಾಮುಲ್ಲಾ, ಅನಂತನಾಗ್, ಪುಲ್ವಾಮಾ, ಕುಪ್ವಾರಾ, ಬುಡ್ಗಮ್ ಮತ್ತು ಶೋಪಿಯಾನ್‌ನ 12 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯಿತು. 10 ಮೊಬೈಲ್ ಫೋನ್‌ಗಳು, ಒಂದು ಲ್ಯಾಪ್‌ಟಾಪ್ ಮತ್ತು 14 ಸಿಮ್ ಕಾರ್ಡ್‌ಗಳು ಸೇರಿದಂತೆ ಡಿಜಿಟಲ್ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.
‘ಕಾಶ್ಮೀರ ಕಣಿವೆಯ ಹಲವು ಜಿಲ್ಲೆಗಳಲ್ಲಿ ಸಾಮಾಜಿಕ ಚಟುವಟಿಕೆಗಳ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದರು. ಇಂತಹ ರಾಷ್ಟ್ರವಿರೋಧಿ ಶಕ್ತಿಗಳಿಗೆ ಈ ದಾಳಿಯು ತೀವ್ರ ಹೊಡೆತ ನೀಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಶ್ರೀನಗರ ಪೊಲೀಸ್ ಠಾಣೆಯಲ್ಲಿ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ 2023ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಶೋಧ ಕಾರ್ಯ ನಡೆಸಲಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.