

ಪ್ರಾತಿನಿಧಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆಗೈಯಲಾಗಿದೆ ಎಂದು ಭಾರತೀಯ ಸೇನೆ ಶುಕ್ರವಾರ ತಿಳಿಸಿದೆ.
ಗುಪ್ತಚರ ಮಾಹಿತಿ ಮೇರೆಗೆ ನ.30ರ ಮಧ್ಯರಾತ್ರಿ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಪುಲ್ವಾಮಾದ ಅರಿಹಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆಯಲ್ಲಿ ಗುರುತು ಪತ್ತೆಯಾಗದ ಉಗ್ರನೊಬ್ಬ ಬಲಿಯಾಗಿದ್ದಾನೆ. ಆತನಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.