ಸಾಂದರ್ಭಿಕ ಚಿತ್ರ
ಶ್ರೀನಗರ: ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ 30 ವರ್ಷಗಳಿಂದ ಮುಚ್ಚಲಾಗಿದ್ದ ‘ಉಮಾ ಭಗವತಿ’ ದೇವಿ ದೇವಸ್ಥಾನವನ್ನು ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರ ಸಮ್ಮುಖದಲ್ಲಿ ಭಾನುವಾರ ತೆರೆಯಲಾಯಿತು.
ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮುಗಿದಿದ್ದು, ಇದೀಗ ದೇವಸ್ಥಾನವನ್ನು ಉದ್ಘಾಟಿಸಿ ಭಕ್ತರಿಗೆ ಮುಕ್ತವಾಗಿಸಲಾಯಿತು. ರಾಜಸ್ಥಾನದಿಂದ ತರಲಾದ ‘ಉಮಾ’ ದೇವಿಯ ಮೂರ್ತಿಯನ್ನು ಧಾರ್ಮಿಕ ವಿಧಿವಿಧಾನಗಳ ನಡುವೆ ದೇವಸ್ಥಾನದ ಗರ್ಭಗುಡಿಯಲ್ಲಿರಿಸಲಾಯಿತು.
ಸ್ಥಳೀಯ ಕಾಶ್ಮೀರಿ ಪಂಡಿತರು ಮತ್ತು ಮುಸ್ಲಿಮರು, ದೇವಸ್ಥಾನದ ಜೀರ್ಣೋದ್ಧಾರದ ಕುರಿತು ಸಂತೋಷ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.